ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿ ದಿವಾಳಿಯಾಗಿದೆ’
  • ‘ಬಿಜೆಪಿ, ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ’

“ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ” ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ” ಎಂದು ಕಿಡಿಕಾರಿದರು.

ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ” ಎಂದರು.

Advertisements

ಆಪರೇಷನ್ ಹಸ್ತ

ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಾದ್ಯಂತ ನೀರಾವರಿ ಪಂಪ್‍ಸೆಟ್‍ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಬರಪರಿಹಾರ ನೀಡಿಲ್ಲ

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡುತ್ತಾ, “40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ, ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ” ಎಂದು ಹರಿಹಾಯ್ದರು.

“ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ” ಎಂದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪಾಹಾರ ಸಭೆ

ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಾಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ” ಎಂದು ತಿಳಿಸಿದರು.

ಬರಪರಿಹಾರ ಬಿಡುಗಡೆಗೊಳಿಸಲಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ” ಎಂದರು.

ಹೈಕಮಾಂಡ್ ನಿರ್ಧಾರ

“ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X