ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ ಎಂದು ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಇದು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ. ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು. ಮತ ಬ್ಯಾಂಕ್​​​ಗೋಸ್ಕರ ಇಂತಹ ಘಟನೆಗಳಿಗೆ ಕಾಂಗ್ರೆಸ್ ಉತ್ತೇಜನ ನೀಡುತ್ತಿದೆ. ಅಯೋಧ್ಯೆಗೆ ಹೋಗಿ ಬಂದರೆ ತಪ್ಪೇನು? ಬೆದರಿಕೆ ಹಾಕಿದವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪಿಎಫ್‌ಐ ನವರ ಬೆದರಿಕೆ‌: ಆರ್‌ ಅಶೋಕ್

“ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಮಂತ್ರಿ ಆಗುವ ಕನಸು ಕಂಡಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೂ ಮನ್ನವೇ ಗೋಧ್ರಾ ಹತ್ಯೆ ಬಗ್ಗೆ ಉಲ್ಲೇಖ ಮಾಡಿದ್ದರು. ಅಯೋಧ್ಯೆಗೆ ಹೋಗುವವರು ಹಿಂದೂಗಳು. ಅವರಿಗೆ ಮುಸ್ಲಿಂ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಪಿಎಫ್‌ಐನವರು ಬೆದರಿಕೆ‌ ಹಾಕಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಬೆಂಗಳೂರಿನಲ್ಲಿಆರೋಪಿಸಿದ್ದಾರೆ.

ಸಮಗ್ರ ತನಿಖೆಗೆ ಸಿ ಟಿ ರವಿ ಆಗ್ರಹ

“ಅಯೋಧ್ಯೆಯಿಂದ ವಾಪಸಾಗುತ್ತಿದ್ದ ವಿಶೇಷ ರೈಲಿಗೆ ಹೊಸಪೇಟೆಯಲ್ಲಿ ಒಬ್ಬ ಮತಾಂಧ ವ್ಯಕ್ತಿ ಹತ್ತಿದ್ದ. ಅಯೋಧ್ಯೆಗೆ ತೆರಳಿ ಹಿಂತಿರುಗುತ್ತಿದ್ದ ರಾಮಭಕ್ತರನ್ನು ಬೆದರಿಸಿ ಗೋಧ್ರಾ ಮಾದರಿಯಲ್ಲಿ ನಿಮ್ಮನ್ನೆಲ್ಲ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಗೋಧ್ರಾ ಮಾದರಿಯಲ್ಲಿ ರೈಲನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆ ಮಾಡಬೇಕು” ಎಂದು ಸಿ ಟಿ ರವಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಎಲ್ಲ ರಾಮಭಕ್ತರು ಸೇರಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರೂ ಕೂಡ ಆರೋಪಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...