RSS ಬಗ್ಗೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ

Date:

ಜನರ ನಡುವೆ ಮನುವಾದ, ದ್ವೇಷವನ್ನು ಬಿತ್ತುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಯಾವುದೇ ಬಗೆಯ ಚಟುವಟಿಗಳಿಗೆ ನಿಷೇಧ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ.

- Advertisement -

“ಸರ್ಕಾರಿ ಮತ್ತು ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆತುತ್ತಾ, ಪೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು” ಎಂದು ಪ್ರಿಯಾಂಕ್ ಖರ್ಗೆ ಇತ್ತೀಚೆಗ ಸಿಎಂಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ಇದಾದ ಬೆನ್ನಲ್ಲೇ ಸಂಘಪರಿವಾರದ ನಾಯಕರುಗಳು ಪ್ರಿಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಿಯಾಂಕ್ ಮತ್ತು ಅವರ ಕುಟುಂಬಕ್ಕೆ ಕಳೆದ ಎರಡು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ಈ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕಳೆದ ಎರಡು ದಿನಗಳಿಂದ ನಿರಂತರವಾಗಿ ನನಗೆ ಕರೆಗಳು ಬರುತ್ತಿವೆ. ನಾನು ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ, ಎಚ್ಚರಿಕೆ ಮತ್ತು ಅಸಭ್ಯ ನಿಂದನೆಗಳನ್ನು ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಮತ್ತು ಇತರೆ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಡೆಸುವುದನ್ನು ಪ್ರಶ್ನಿಸಿದ ಕಾರಣಕ್ಕೆ ನನಗೆ ಬೆದರಿಕೆ ಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

“ಆದರೆ ನಾನು ಭಯಪಟ್ಟಿಲ್ಲ ಮತ್ತು ಆಶ್ಚರ್ಯವೂ ಆಗಿಲ್ಲ. ಆರ್‌ಎಸ್‌ಎಸ್‌ ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ನನ್ನನ್ನೇಕೆ ಬಿಡುತ್ತಾರೆ? ಬೆದರಿಕೆ ಮತ್ತು ವೈಯಕ್ತಿಕ ನಿಂದನೆಯಿಂದ ನನ್ನನ್ನು ಮೌನವಾಗಿಸಬಹುದು ಎಂದು ಅವರಂದುಕೊಂಡಿದ್ದರೆ, ಅದು ಅವರ ತಪ್ಪು ಕಲ್ಪನೆ. ಇದು ಆರಂಭ ಮಾತ್ರ” ಎಂಬ ಎಚ್ಚರಿಕೆಯ್ನನೂ ಪ್ರಿಯಾಂಕ್ ನೀಡಿದ್ದಾರೆ.

“ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬರ ಮೂಲತತ್ವವನ್ನು ಹೊಂದಿರುವ, ಸಮಾನತೆ, ಉದ್ದೇಶ ಮತ್ತು ದಯೆ ಹೊಂದಿರುವ ಸಮಾಜವನ್ನು ಕಟ್ಟುವ ಸಮಯ ಇದಾಗಿದೆ. ಹಾಗೆಯೇ ಈ ದೇಶದಿಂದ ಅತಿ ಕೆಟ್ಟ ವೈರಸ್‌ ಅನ್ನು ಹೊರದಬ್ಬುವ ಸಮಯವಿದು” ಎಂದು ಎಕ್ಸ್‌ನಲ್ಲಿ ಸಚಿವರು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...