ಪೊಲೀಸರಿಗೆ ಧಮ್ಕಿ ಹಾಕಿ ಗೂಂಡಾ ವರ್ತನೆ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ

Date:

Advertisements

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧನ ನಡೆಸುವ ಸಾಧ್ಯತೆ ಇದೆ.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನವಾದ ರೌಡಿಶೀಟರ್ ಪರ ಪ್ರತಿಭಟನೆಯ ನೆಪದಲ್ಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಶಾಸಕನಿಗೆ ಈಗ ಬಂಧನ ಭೀತಿ ಎದುರಾಗಿದ್ದು, ಬೆಳ್ತಂಗಡಿ ಪೊಲೀಸರು ಶಾಸಕರ ಮನೆ ಸುತ್ತುವರಿದು ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಳೆದ ಮೇ 18ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ಬಂಧಿಸಿದ್ದನ್ನು ಖಂಡಿಸಿ ಶಾಸಕ ಹರೀಶ್ ಪೂಂಜಾ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂದಿಸಿದ್ದರು.

Advertisements

Belthangady BJP MLA HARISH POONJA ARRESTED

ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದುವರಿದ ಭಾಗವಾಗಿ ಮೇ 20ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೇ 22ರಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್‌ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜಾ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕರ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್‌ ಸರ್ಪಗಾವಲು ಇರಿಸಲಾಗಿದೆ.

ಇದನ್ನು ಓದಿದ್ದೀರಾ? ಅಕ್ರಮ ಕಲ್ಲುಕೋರೆ: ಬಿಜೆಪಿ ಮುಖಂಡನ ಬಂಧನ; ಠಾಣೆಗೆ ನುಗ್ಗಿ ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಶಾಸಕರು ಮನೆಯಲ್ಲಿ ಇಲ್ಲದ ಕಾರಣ ಶಾಸಕರ ಪರ ವಕೀಲರ ತಂಡ ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಶಾಸಕರು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಾಸಕರ ಪರ ಹಲವು ಬಿಜೆಪಿ ಕಾರ್ಯಕರ್ತರು ಶಾಸಕರ ಮನೆ ಎದುರು ಜಮಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X