ರಾಜ್ಯ ರಾಜಕಾರಣದಿಂದ ಕೇಂದ್ರಕ್ಕೆ ಹಾರಿದ ಕರ್ನಾಟಕದ ಮೂವರು ಮಾಜಿ ಸಿಎಂಗಳು

Date:

2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದು ಸಂಸತ್ತಿಗೆ ಕಾಲಿಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

- Advertisement -

ಈ ಮೂವರು ನಾಯಕರು ರಾಜ್ಯದ ರಾಜಕಾರಣಕ್ಕೆ ಸೀಮಿತವಾಗಿದ್ದರು. ಇದೀಗ, ಸಂಸದರಾಗಿ ರಾಷ್ಟ್ರ ರಾಜಕೀಯದಲ್ಲಿ ತೋಡಗಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸದ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿಗ್ಗಾವಿ ಶಾಸಕ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೊಮ್ಮಾಯಿ 7,02,189 ಮತಗಳನ್ನು ಪಡೆದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ (6,60,191) ಅವರನ್ನು ಮಣಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

2023ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಸವರಾಜ್ ಬೊಮ್ಮಾಯಿ 1 ಲಕ್ಷಕ್ಕೂ ಹೆಚ್ಚು ಮತ ಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಗಮದ್ ಖಾನ್ ಪಠಾಣ್ ವಿರುದ್ಧ ಗೆಲುವು ಕಂಡಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸಿ 68,792 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸತ್‌ ಪ್ರವೇಶಿಸುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಎಚ್‌.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಿತ್ತು. ಅವರ ರಾಜೀನಾಮೆಯಿಂದ ಚನ್ನಪಟ್ಟಣ ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳು ತೆರವಾಗಲಿವೆ. ಈ ಎರಡೂ ಕ್ಷೇತ್ರಗಳಿಗೆ ಆರು ತಿಂಗಳೊಳಗೆ ಉಪಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...