ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಿಂದ ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಸಾಧ್ಯ: ಸಿಎಂ ಸಿದ್ದರಾಮಯ್ಯ

Date:

Advertisements

ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಇಡಿ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನಿಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ಧಕವಾಗಿ ಕೆಲಸ ಮಾಡುತ್ತದೆ” ಎಂದು ಅಭಿಪ್ರಾಯಿಸಿದರು.

Advertisements

“ಅಂಬೇಡ್ಕರ್ ಅವರ ಸಂವಿಧಾನ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲ ರೀತಿಯ ನೆರವನ್ನು ನೀಡಲಾಗುವುದು” ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.

“ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ವೆಚ್ವು ಪಾಲಿಸುವಂತಹ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ” ಎಂದರು.

2019ರಿಂದ ಉತ್ತಮ ಸಿನಿಮಾ ಆಯ್ಕೆಗೆ ಸಮಿತಿ ರಚಿಸಲಾಗಿದೆ ಎಂದ ಸಿಎಂ

2019ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಆ ಎಲ್ಲಾ ಬಾಕಿ ಉಳಿದಿರುವ ಎಲ್ಲ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶ್ರೇಷ್ಠ ನಟ ಶಿವರಾಜ್ ಕುಮಾರ್, ಅಂತಾರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿ ನಟ ಡಾಲಿ ಧನಂಜಯ್, ಖ್ಯಾತ ನಿರ್ದೇಶಕ ಜಬ್ಬಾರ್ ಪಟೇಲ್, ಚೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಷಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X