ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಗ, ಅಳಿಯನ ಕೊರಳಲ್ಲೂ ಹುಲಿ ಉಗುರು ಲಾಕೆಟ್; ಫೋಟೋ ವೈರಲ್

Date:

ಸದ್ಯ ರಾಜ್ಯ ರಾಜಕೀಯದಲ್ಲಿ ಸುದ್ದಿ ಮಾಡುತ್ತಿರುವ ಹುಲಿ ಉಗುರು ಪ್ರಕರಣ ದಿನದಿಂದ ದಿನಕ್ಕೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

- Advertisement -

‘ಹುಲಿ ಉಗುರು’ ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10ನೇ ಸೀಸನ್‌ನ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿಗಳು, ರಾಜಕಾರಣಿಗಳು ಧರಿಸಿರುವ ತಮ್ಮ ಕೊರಳಲ್ಲಿ ಧರಿಸಿರುವ ಫೋಟೋಗಳು ವೈರಲ್ ಆಗುತ್ತಿದೆ. ಆ ಮೂಲಕ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಈಗ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹತ್ತಿರ ಬಂದು ನಿಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಅಳಿಯ, ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮದುವೆ, ಮತ್ತಿತರೆ ಸಮಾರಂಭಗಳಲ್ಲಿ ಮೃಣಾಲ್ ಹಾಗೂ ರಜತ್ ಉಳ್ಳಾಗಡ್ಡಿ ಹುಲಿ ಉಗುರು ಇರುವ ಲಾಕೆಟ್ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫೋಟೋ ವೈರಲ್ ಆಗುತ್ತಿದ್ದಂತೆ ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು, ಸಂತೋಷ್ ಬಂಧನವಾಯ್ತು. ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ ಎಂದು ಸಚಿವರು ಹೇಳುತ್ತಿದ್ದಾರೆ. ಇವರಿಗೂ ಅನ್ವಯವಾಗುತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

hebbalkar aliya

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಳಿಯ ರಜತ್ ಉಳ್ಳಾಗಡ್ಡಿ

ವರ್ತೂರು ಸಂತೋಷ್ ಅವರಿಂದ ಆರಂಭಗೊಂಡ ಈ ಪ್ರಕರಣ ಸದ್ಯ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸುವವರೆಗೆ ತಲುಪಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಲಾಖೆಯ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆಯನ್ನು ನಡೆಸಿದ್ದಾರೆ.

‘ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೆಯ ಒಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಈ ಕುರಿತು ತಜ್ಞರ ಜೊತೆ ಚರ್ಚಿಸಿ ವರದಿ ಸಲ್ಲಿಸಲು ಈಗಾಗಲೇ ತಂಡ ರಚಿಸಲಾಗಿದೆ. ವರದಿ ಬಂದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಕೊಟ್ಟು ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆ ಬದ್ಧವಾಗಿದೆ’ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಜಯಪುರದಲ್ಲಿ ದಾಳಿ
ಇಂದು(ಗುರುವಾರ) ವಿಜಯಪುರದಲ್ಲಿ ಪರಿಶೀಲನೆ ನಡೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಧರಿಸುತ್ತಿದ್ದ ಹುಲಿ ಉಗುರಿನ ಲಾಕೆಟ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಅದನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...