ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗುವ ಸಮಯ ಮುಂದೊಂದು ದಿನ ಬರಲಿದೆ: ಸತೀಶ ಜಾರಕಿಹೊಳಿ

Date:

  • ಈಗ ನಾನು ಖಾಸಗಿಯಾಗಿ ವಿದೇಶಿ ಪ್ರವಾಸಕ್ಕೆ ಹೋಗಿದ್ದೆ ಅಷ್ಟೇ
  • ಇಲಾಖೆಗಳ ವಿಲೀನಕ್ಕೆ 10 ವರ್ಷದ ಹಿಂದೆಯೇ ವರದಿ ಕೊಟ್ಟಿದ್ದಾರೆ

ಮುಂದೆ ಸಮಯ ಬಂದಾಗ ಶಾಸಕರು ಮತ್ತು ಮಾಜಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗೋಣ. ಮುಂದೊಂದು ದಿನ ಆ ಸಮಯ ಬರಲಿದೆ. ಈಗ ನಾನು ಖಾಸಗಿಯಾಗಿ ಪ್ರವಾಸಕ್ಕೆ ಹೋಗಿದ್ದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವಾಗ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅನುದಾನ ಕೊರತೆಯಾಗಿದ್ದಕ್ಕೆ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿ, “ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲ. ಹಾಗಾಗಿ ಈ ಇಲಾಖೆಗಳನ್ನು ವಿಲೀನಗೊಳಿಸುವ ಬಗ್ಗೆ 10 ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದಾರೆ. ಈ ರೀತಿ ಹಿಂದಿನ ಸರ್ಕಾರಗಳಲ್ಲೂ ವಿಲೀನ ಪ್ರಕ್ರಿಯೆ ನಡೆದಿವೆ. ಗ್ಯಾರಂಟಿ ಯೋಜನೆಗಳಿಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಾಂತರಾಜ್‌ ಆಯೋಗದ ವರದಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆಯೇ? ಎಂಬುದಕ್ಕೆ ಪ್ರತಿಕ್ರಿಯಿಸಿ, “ಈ ವರದಿ ನೀಡಲು ಇನ್ನೂ ಎರಡು ತಿಂಗಳು ಸಮಯಾವಕಾಶ ಕೇಳಿದ್ದಾರೆ‌. ವರದಿ ಬಂದ ಬಳಿಕ ನೋಡೋಣ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಬಗ್ಗೆ ಚರ್ಚಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ಕಾಂತರಾಜ್‌ ಆಯೋಗದ ವರದಿ ಜಾರಿಯಾದರೆ ಕಾಂಗ್ರೆಸ್ ಸರ್ಕಾರಕ್ಕೆ ತೊಂದರೆಯಾಗುತ್ತದೆಯೇ ಎಂದು ಪ್ರಶ್ನಿಸಿದಾಗ, “ಆಯೋಗದವರು ನಮಗೆ ಇನ್ನೂ ವರದಿಯನ್ನೇ ಕೊಟ್ಟಿಲ್ಲ. ವರದಿ ನೀಡಿದ ನಂತರ, ಅದರ ಬಗ್ಗೆ ಚರ್ಚೆಯಾಗಬೇಕು. ಅದಕ್ಕೆ ಸುದೀರ್ಘ ಪ್ರಕ್ರಿಯೆ ಬಾಕಿ ಇದೆ” ಎಂದು ತಿಳಿಸಿದರು.

ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ವಿಚಾರವಾಗಿ ಮಾತನಾಡಿ, “ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಎಲ್ಲ ರೀತಿಯ ಸಿದ್ಧತೆ ಮಾಡಿದ್ದಾರೆ. ಈ ಬಾರಿಯ ಅಧಿವೇಶನ ಯಾವ ತೊಂದರೆಯಿಲ್ಲದೆ, ಸುಗಮವಾಗಿ ನಡೆಯಲಿದೆ. ಅಧಿವೇಶನದ ವೇಳೆ ಪ್ರತಿಭಟನೆ ಮಾಡುವವರಿಗೆ ಬೇಡ ಎನ್ನಲಾಗದು. ಆಯಾ ಇಲಾಖೆ ಸಚಿವರು ಮೊದಲೇ ಅವರ ಅಹವಾಲುಗಳನ್ನು ಸ್ವೀಕರಿಸಿದರೆ, ಪ್ರತಿಭಟನೆಗಳು ಸ್ವಲ್ಪ ಕಡಿಮೆ ಆಗಬಹುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...