ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ ಎಂದ ಕಾಂಗ್ರೆಸ್ ಶಾಸಕ ಷಡಕ್ಷರಿ

Date:

ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ ಎಂದು ಸ್ವತಃ ತಿಪಟೂರು ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಹೇಳಿಕೆ ನೀಡಿದ್ದಾರೆ.

- Advertisement -

ತಿಪಟೂರಿನಲ್ಲಿ ಅ.2ರಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ತಿಪಟೂರು ಜಿಲ್ಲೆ ಮಾಡಬೇಕು ಎಂಬ ಹೋರಾಟ ನನ್ನದು. ಆದರೆ ಮುಂದಿನ ಬಜೆಟ್‌ವರೆಗೆ ಸರ್ಕಾರದ ಬಳಿ ಹಣ ಇಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ. ಸದ್ಯದ ಪರಿಸ್ಥಿತಿಯಲ್ಲಿ ತಿಪಟೂರು ಜಿಲ್ಲೆ ಕನಸು ನನಸಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಜಿಲ್ಲೆ ಮಾಡಬೇಕು ಅಂದರೆ ಮೊದಲು ಬೆಳಗಾವಿಯನ್ನು ಮಾಡಬೇಕು. 18 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿ ಎರಡು ಜಿಲ್ಲೆ ಮಾಡಿದ ನಂತರ ನಮ್ಮ ತಿಪಟೂರು ಕೂಡ ಒಂದು ಜಿಲ್ಲೆ ಮಾಡಬೇಕು. ಮುಂದಿನ ಬಜೆಟ್‌ವರೆಗೂ ಸರ್ಕಾರದ ಬಳಿ ದುಡ್ಡಿಲ್ಲ” ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿಗಳ ಬಳಿ ತಿಪಟೂರು ಜಿಲ್ಲೆ ಮಾಡುವ ಬೇಡಿಕೆ ಇಟ್ಟಿದ್ದೆ ಆದರೆ ಮುಖ್ಯಮಂತ್ರಿಗಳು ಅದನ್ನು ಒಪ್ಪಿಕೊಂಡಿಲ್ಲ. ಹೊಸದಾಗಿ ಮಾಡಿದ ಜಿಲ್ಲೆಗಳಿಗೆ ಕುರ್ಚಿ, ಮೇಜು ಕೊಡೋದಕ್ಕೆನೇ ದುಡ್ಡಿಲ್ಲ, ಇನ್ನು ಹೊಸ ಜಿಲ್ಲೆ ಮಾಡೋಕಾಗುತ್ತಾ? ಎಂದು ನನ್ನನ್ನು ಸುಮ್ಮನಿರಿಸಿದ್ದಾರೆ. ಆದರೂ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ನನಗೂ ಆಗಲ್ಲ, ಅವರಿಗೂ ಆಗಲ್ಲ” ಎಂದು ಶಾಸಕ ಷಡಕ್ಷರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...