ಟಿಪ್ಪು ಜಯಂತಿ | ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಸರ್ಕಾರ

Date:

Advertisements

ಶುಕ್ರವಾರ (ನ.10) ಟಿಪ್ಪು ಜಂಯತಿಯಂದು ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಇಂದು ಟಿಪ್ಪು ವರ್ಫ್‌ ಎಸ್ಟೇಟ್‌ ಸಂಘವು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿಯ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಯಾರೂ ಸಭೆ ಸೇರದಂತೆ ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ.

ಶ್ರೀರಂಗಪಟ್ಟಣ ತಹಶಿಲ್ದಾರ್‌ ಪರಶುರಾಮ ಸತ್ತಿಗೇರಿ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಸಿಆರ್‌ಪಿಸಿ ಕಲಂ 144 ಅಡಿಯಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಪಟ್ಟಣದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಯಾವುದೇ ರೀತಿಯ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಬ್ಯಾನರ್‌, ಬಂಟಿಂಗ್ಸ್‌, ಮೈಕ್‌, ಪಟಾಕಿ ಯಾವುದಕ್ಕೂ ಅವಕಾಶವಿಲ್ಲ. ಡಿಜೆ ಹಾಕುವಂತಿಲ್ಲ, ರಸ್ತೆ ರಡೆ ನಡೆಸುವಂತಿಲ್ಲ” ಎಂದು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ನವೆಂಬರ್ 11ರಂದು ಟಿಪ್ಪು ಜಯಂತಿ ಆಚರಣೆಗೆ ಆದೇಶ ಹೊರಡಿಸಿತ್ತು. ಅದರಂತೆ ಟಿಪ್ಪು ಜಯಂತಿ ಕಾರ್ಯಕ್ರಮಗಳನ್ನು ಸರ್ಕಾರ ನಡೆಸುತ್ತಿತ್ತು. ಆದರೆ, ಬಿಜೆಪಿ ಆಡಳಿತದಲ್ಲಿ ಟಿಪ್ಪು ಜಯಂತಿಯಲ್ಲಿ ನಿಲ್ಲಿಸಲಾಗಿತ್ತು. ಇದೀಗ, ಕಾಂಗ್ರೆಸ್‌ ಸರ್ಕಾರವೇ ಮತ್ತೆ ಅಧಿಕಾರದಲ್ಲಿದ್ದರೂ ತಾನೇ ಜಾರಿಗೆ ತಂದಿದ್ದ ಅಚರಣೆಗೆ ತಾನೇ ವಿರುದ್ಧವಾಗಿದೆ ಎಂಬುದನ್ನು ನಿಷೇಧಾಜ್ಞೆ ಸಾಬೀತು ಪಡಿಸಿದೆ ಎನ್ನಲಾಗಿದೆ.

Advertisements

ಇದೆಲ್ಲದರ ನಡುವೆ, ಟಿಪ್ಪು ಹುಟ್ಟಿದ ದಿನಾಂಕ ನವೆಂಬರ್ ತಿಂಗಳು ಅಲ್ಲ, ಡಿಸೆಂಬರ್ 1 ಎಂದು ಸಂಶೋಧಕರು ಮತ್ತೆ ಮಾಡಿದ್ದಾರೆ. ಹೀಗಾಗಿ, ಟಿಪ್ಪು ಜಯಂತಿಯ ದಿನಾಂಕವೂ ಬದಲಾಗಿದೆ. ಆದರೆ, ಅಂದು ಕೂಡ ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ, ಸರ್ಕಾರ ಈ ವರ್ಷ ಟಿಪ್ಪು ಜಯಂತಿ ಆಚರಿಸುವುದು ಅನುಮಾನವಾಗಿ ಉಳಿದಿದೆ.

ಆದರೆ, ಹಲವರು ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುತ್ತಾರೆ. ಅಂತೆಯೇ ಟಿಪ್ಪು ವರ್ಫ್‌ ಎಸ್ಟೇಟ್‌ ಶುಕ್ರವಾರ ಟಿಪ್ಪು ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ, ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ. ಇದು ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಟಿಪ್ಪುಗೆ ಮಾಡಿದ ಅವಮಾನ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X