ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಟಿಎಂಸಿ ಭಾರೀ ಮುನ್ನಡೆ, ಬಿಜೆಪಿ ಕಳಪೆ ಸಾಧನೆ

Date:

ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ಎಣಿಕೆಯ ಮಾಹಿತಿಯ ಪ್ರಕಾರ ಆಡಳಿತ ಪಕ್ಷ ಟಿಎಂಸಿ ಭಾರೀ ಮುನ್ನಡೆ ಪಡೆದುಕೊಂಡಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ತೀರ ಕಳಪೆ ಸಾಧನೆ ಮಾಡಿದೆ.

ಪಶ್ಚಿಮ ಬಂಗಾಳ ರಾಜ್ಯದ 63,299 ಸ್ಥಾನಗಳ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಟಿಎಂಸಿ 14,767 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಕೇವಲ 3,344 ಸ್ಥಾನಗಳನ್ನು ಪಡೆದಿದೆ. ಸಿಪಿಎಂ 1086 ಹಾಗೂ ಕಾಂಗ್ರೆಸ್ 783 ಸ್ಥಾನಗಳಲ್ಲಿ ಜಯಗಳಿಸಿದೆ. ಇತರ ಪಕ್ಷಗಳು 854 ಪಂಚಾಯತ್‌ನಲ್ಲಿ ಗೆಲುವು ಸಾಧಿಸಿವೆ. ರಾಜ್ಯದ ಒಟ್ಟು 341 ಪಂಚಾಯತ್ ಸಮಿತಿಗಳ ಕ್ಷೇತ್ರಗಳಲ್ಲಿ ಟಿಎಂಸಿ 28 ರಲ್ಲಿ ಮುನ್ನಡೆ ಸಾಧಿಸಿದೆ.

ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆ ನಡೆದಿದ್ದು, ಮತ ಚಲಾವಣೆಯಲ್ಲಿ ನಡೆದ ಹಿಂಸಾಚಾರದಲ್ಲಿ ರಾಜ್ಯದಲ್ಲಿ ಕನಿಷ್ಠ 20 ಜನರು ಮೃತಪಟ್ಟಿದ್ದರು. ಹಿಂಸಾಚಾರ ಪ್ರಯುಕ್ತ ಸುಮಾರು 697 ಬೂತ್‌ಗಳಲ್ಲಿ ಮರುಮತದಾನ ನಡೆದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಇಡಿ ಮುಖ್ಯಸ್ಥ ಸಂಜಯ್ ಮಿಶ್ರಾ ಸೇವಾ ವಿಸ್ತರಣೆ ಕಾನೂನುಬಾಹಿರ ಎಂದ ಸುಪ್ರೀಂ ಕೋರ್ಟ್

ಲೋಕಸಭೆ ಚುನಾವಣೆಗೆ ಒಂದು ವರ್ಷದ ಮೊದಲು ನಡೆದಿರುವ ಪಂಚಾಯತ್ ಚುನಾವಣೆಗಳು ಬಹುಪಾಲು ಗ್ರಾಮೀಣ ರಾಜ್ಯದ ರಾಜಕೀಯ ಮಿಡಿತದ ಪೂರ್ವಸೂಚಕವೆಂದು ಪರಿಗಣಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 2008ರಿಂದಲೂ ಪ್ರಾಬಲ್ಯ ಸಾಧಿಸುತ್ತಿದೆ. ಆರಂಭದಲ್ಲಿ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಎಡರಂಗದ ಸದೆಬಡಿಯಿತು. ಆರಂಭದಲ್ಲಿ ಸ್ಥಾನಗಳ ಪೈಕಿ ಶೇ 50 ರಷ್ಟು ಗೆಲುವು ಪಡೆಯುತ್ತಿದ್ದ ಟಿಎಂಸಿ, ವಿಜಯದ ಹಾದಿಯನ್ನು ಶೇ.85ರಿಂದ 90ಕ್ಕೆ ವಿಸ್ತರಿಸಿಕೊಂಡಿದೆ.  

ಪಶ್ಚಿಮ ಬಂಗಾಳದಲ್ಲಿ ಸಿಂಗೂರ್‌ ಹೋರಾಟದ ನಂತರ ಹೆಚ್ಚು ಪ್ರವರ್ಧಮಾನಕ್ಕೆ ಬಂದ ಟಿಎಂಸಿ, ಎಡಪಕ್ಷಗಳು ಮತ್ತು ಕಾಂಗ್ರೆಸ್‌ ಅನ್ನು ರಾಜಕೀಯವಾಗಿ ಮೂಲೆಗುಂಪು ಮಾಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರತಿರೋಧ ಒಡ್ಡುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಕೇಂದ್ರ...

ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ...

ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು...

ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಪಶ್ಚಿಮ ಬಂಗಾಳದ...