ಬ್ರೇಕಿಂಗ್ ನ್ಯೂಸ್ | ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅಮಾನತು

Date:

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ಅಶಿಸ್ತಿನ ವರ್ತನೆ ಆರೋಪದ ಮೇಲೆ ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಮುಂಗಾರು ಅಧಿವೇಶನದ ಮುಂದಿನ ಎಲ್ಲ ಕಲಾಪದಿಂದ ಅಮಾನತು ಮಾಡುವುದಾಗಿ ರಾಜ್ಯಸಭಾ ಸ್ಪೀಕರ್ ಜಗದೀಪ್ ಧನ್‌ಕರ್ ಘೋಷಿಸಿದರು. ಬಳಿಕ ಇದನ್ನು ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ನಾಯಕ ಪೀಯೂಷ್ ಗೋಯಲ್ ಮತಕ್ಕೆ ಹಾಕಿದರು. ಆ ಬಳಿಕ ಅನುಮೋದನೆ ನೀಡಲಾಯಿತು.

ಈ ಮೊದಲು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಲಾಗಿತ್ತು. ಅವರು ದೆಹಲಿಯ ಸಂಸತ್ ಭವನದ ಎದುರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೂ ಮೊದಲು ಸಭಾಧ್ಯಕ್ಷರು ಹಾಗೂ ಡೆರೆಕ್ ಓಬ್ರಿಯಾನ್ ನಡುವೆ ವಾಗ್ವಾದ ನಡೆದಿತ್ತು. ಟಿಎಂಸಿ ಸದಸ್ಯ ಒಬ್ರಿಯಾನ್ ತಮ್ಮ ಭಾಷಣದಲ್ಲಿ ನವದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ, 2023 ಕ್ಕೆ ಸೀಮಿತಗೊಳಿಸಲು ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ಧ ಆರೋಪಗಳನ್ನು ಮಾಡಿದ ನಂತರ ರಾಜ್ಯಸಭಾ ಅಧ್ಯಕ್ಷರಾದ ಧನಕರ್ ಆಕ್ರೋಶಗೊಂಡಿದ್ದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಇಂದು ಡೆರೆಕ್ ಓಬ್ರಿಯಾನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆ ಮಂಡಿಸಿದರು. ನಂತರದಲ್ಲಿ ಅಶಿಸ್ತಿನ ವರ್ತನೆ ಆರೋಪದ ಮೇಲೆ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ. ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಕಲಾಪ ಇಂದು ಮಧ್ಯಾಹ್ನದವರೆಗೂ ಮುಂದೂಡಲಾಗಿದೆ.

ಇಂದು ಬೆಳಗ್ಗೆ ಪ್ರಧಾನಿ ವಿರುದ್ಧ ಟ್ವೀಟ್ ಮಾಡಿದ್ದ ಒಬ್ರಿಯಾನ್ ವಾಗ್ದಾಳಿ ನಡೆಸಿದ್ದರು. ಈಗ ಟಿಎಂಸಿ ಸಂಸದರನ್ನು ಅಮಾನತು ಮಾಡಿದ್ದು, ಇದೇ ವಿಚಾರ ಹಿಡಿದು ಆಡಳಿತ ಪಕ್ಷದ ವಿರುದ್ಧ ಹರಿಹಾಯಲು ವಿಪಕ್ಷಗಳು ಸಜ್ಜಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ 'ಇಂಡಿಯಾ' ಮೈತ್ರಿಕೂಟ ಏಳು ರಾಜ್ಯಗಳ...

ಜಮ್ಮು-ಕಾಶ್ಮೀರ | ‘ಹುತಾತ್ಮರ ದಿನ’ ಆಚರಣೆಗೆ ತಡೆ; ಹಲವು ನಾಯಕರಿಗೆ ಗೃಹಬಂಧನ

'ಹುತಾತ್ಮರ ದಿನಾಚರಣೆ' ಆಚರಿಸಲು ಶ್ರೀನಗರದ ಡೌನ್‌ಟೌನ್‌ಲ್ಲಿರುವ ಹುತಾತ್ಮರ ಸ್ಮಶಾಕಕ್ಕೆ ತೆರಳಲು ನಮಗೆ...

ವಾಲ್ಮೀಕಿ ನಿಗಮ ಅಕ್ರಮ | ಚಂದ್ರಶೇಖರ್‌ದು ಆತ್ಮಹತ್ಯೆ ಅಲ್ಲ, ಸರ್ಕಾರದ ಕೊಲೆ: ಕುಮಾರಸ್ವಾಮಿ ಆರೋಪ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರದ್ದು...