ಲೋಕಸಭೆ ಚುನಾವಣೆ| ಟಿಎಂಸಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲ್ಲ: ಸುದೀಪ್ ಬಂಡೋಪಾಧ್ಯಾಯ

Date:

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾಗವಹಿಸುವುದಿಲ್ಲ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ.

- Advertisement -

“ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿಯವರು ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆದರೆ ನಮ್ಮ ಪಕ್ಷ ಭಾಗವಹಿಸದಿರಲು ನಿರ್ಧರಿಸಿದೆ” ಎಂದು ಬಂಡೋಪಾಧ್ಯಾಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಶನಿವಾರ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭಕ್ಕೆ ಪಕ್ಷವು ಹಾಜರಾಗುವುದಿಲ್ಲ ಎಂದು ಘೋಷಿಸಿದ್ದರು. “ನಮಗೆ ಆಹ್ವಾನ ಬಂದಿಲ್ಲ ಅಥವಾ ಬಂದರೂ ನಾವು ಅದರಲ್ಲಿ ಭಾಗವಹಿಸುತ್ತಿಲ್ಲ” ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ?  ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

ಭಾನುವಾರ ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೂ ಮುನ್ನ ಸಚಿವ ಸಂಪುಟದ ಭಾಗವಾಗಲಿರುವವರು ಪ್ರಧಾನಿ ನಿವಾಸದಲ್ಲಿ ಚಹಾ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಶ್ಚಿಮ ಬಂಗಾಳದ 12 ಬಿಜೆಪಿ ಸಂಸದರಲ್ಲಿ ಒಬ್ಬರಾದ ಸಂತಾನು ಠಾಕೂರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಮಾಜಿ ರಾಜ್ಯ ಸಚಿವ ಠಾಕೂರ್ ಅವರು ಚಹಾ ಕಾರ್ಯಕ್ರಮಕ್ಕೆ ಆಹ್ವಾನವನ್ನು ಸ್ವೀಕರಿಸುವುದನ್ನು ಖಚಿತಪಡಿಸಿಲ್ಲ, ಹಾಗೆಯೇ ನಿರಾಕರಿಸಲಿಲ್ಲ.

ಸಂಸದರೊಂದಿಗೆ ನಡೆದ ಸಭೆಯಲ್ಲಿ ಬ್ಯಾನರ್ಜಿ ಎನ್‌ಡಿಎ ಸರ್ಕಾರವು ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ತನ್ನ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಬಹುಮತ ಸಿಗದ ಕಾರಣ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಮಮತಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...