ಕೆಎಸ್ಆರ್‌ಟಿಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

Date:

“ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷಕ್ಕೆ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹೇಳುತ್ತಾರೆಯೇ? ಎಂದು ಪ್ರಶ್ನಿಸಿದ ಅವರು, “ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ವಿರೋಧ ಪಕ್ಷದವರು ಸಾರಿಗೆ ದರಗಳನ್ನು ಹೆಚ್ಚಿಸಲಾಗುತ್ತದೆ” ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೆಎಸ್ಆರ್‌ಟಿಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

“ನರೇಂದ್ರ ಮೋದಿಯವರು ಕೇಂದ್ರ ಅಬಕಾರಿ ತೆರಿಗೆ 9.48 ರೂ. ಇದ್ದುದ್ದನ್ನು 32.98 ರೂ.ಗಳಿಗೆ ಏರಿಸಿದರು. ನಾವು ಮಾಡಿದೆವೋ ಅವರು ಹೆಚ್ಚು ಮಾಡಿದರು. ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಒಂದು ಬ್ಯಾರೆಲ್‍ಗೆ ಕಚ್ಛಾತೈಲಕ್ಕೆ 113 ಡಾಲರ್ ಇತ್ತು, ಈಗ ಎಷ್ಟಾಗಿದೆ ಎಂದು ತಿಳಿದುಕೊಳ್ಳಿ. 2015 ರಲ್ಲಿ 50 ಡಾಲರ್‌ಗೆ ಇಳಿದಾಗ ಬೆಲೆಯನ್ನು ಕಡಿಮೆ ಮಾಡಿದರೇ? ಒಮ್ಮೆ 27 ಡಾಲರ್‌ಗೆ ಕಚ್ಛಾತೈಲ ಬೆಲೆ ಇಳಿದಿತ್ತು. ಆಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಿದರೆ? ಬಿಜೆಪಿ ಹೆಚ್ಚಿಸಿದರೆ ಮಾಧ್ಯಮದವರು ಸುಮ್ಮನಿರುತ್ತಾರೆ. ತಿಳಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರೋಪಗಳನ್ನು ವಸ್ತುಸ್ಥಿತಿಯ ಮೇಲೆ ಮಾಡಬೇಕು” ಎಂದ ಸಿಎಂ, “ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ಒಂದು ಲೀಟರ್ ಪೆಟ್ರೋಲ್ ಬೆಲೆ 72 ರೂ.ಗಳಾಗಿತ್ತು. ಇಂದು 102 ರೂ.ಗಳಾಗಲು ಯಾರು ಕಾರಣ. ಒಂದು ಕಡೆ ಕಚ್ಛಾತೈಲದ ಬೆಲೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಹೆಚ್ಚು ಮಾಡಲಾಗಿದೆ. ಮನ್‌ಮೋಹನ್ ಸಿಂಗ್ ಅವರು ಇದ್ದಾಗ 103 ಕಚ್ಛಾತೈಲದ ಬೆಲೆ ಡಾಲರ್ ಬೆಲೆ ಇದ್ದಾಗ ಸಹಾಯಧನವನ್ನೂ ನೀಡಿ ಪೆಟ್ರೋಲ್ ಬೆಲೆಯನ್ನೂ ಇಳಿಸಿದ್ದರು. ನರೇಂದ್ರ ಮೋದಿಯವರ ಕಾಲದಲ್ಲಿ ಹೆಚ್ಚಾಗಿದೆ” ಎಂದರು.

ಗಣಿಗಾರಿಕೆಗೆ ಅನುಮತಿ ನೀಡಿರುವ ಬಗ್ಗೆ ಪರಿಶೀಲಿಸಲಾಗುವುದು

ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರಪ್ರೇಮಿಗಳು ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿ, “ಕೇಂದ್ರ ಸಚಿವ ಹೆಚ್.ಡಿ .ಕುಮಾರಸ್ವಾಮಿಯವರನ್ನು ಕೇಳಿ. ಒಂದು ಕಾಲದಲ್ಲಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಬಿಜೆಪಿಯಲ್ಲಿ ಯೋಗಿ-ಮೌರ್ಯ ನಡುವೆ ಗುದ್ದಾಟ; ಮೋದಿ-ಶಾ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ....

ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಯೂ-ಟರ್ನ್‌ ಸರ್ಕಾರ ಎಂದ ಬಿಜೆಪಿ

ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ 75% ಮೀಸಲಾತಿ ಒದಗಿಸುವ ಮಸೂದೆಯನ್ನು...

‘ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು’; ಬಿಜೆಪಿ ಮಿತ್ರ ಪಕ್ಷದ ಟೀಕೆ

ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ...