ಪ್ರವಾಸೋದ್ಯಮ | ರಾಜ್ಯದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಸೂಚನೆ

Date:

ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯದಲ್ಲಿ 320 ಕಿ.ಮೀ. ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಅವರು ಮಾತನಾಡಿ, “ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು” ಎಂದು ಸೂಚಿಸಿದರು.

“ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ” ಎಂದರು.

“ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನ ಒದಗಿಸಲಾಗುವುದು” ಎಂದು ಹೇಳಿದರು.

“ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು. ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ” ಎಂದರು.

ಸಚಿವ ಹೆಚ್ ಕೆ ಪಾಟೀಲ್ ಪ್ರಸ್ತಾವನೆ

ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್‌ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್‌ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಸಚಿವ ಹೆಚ್‌ ಕೆ ಪಾಟೀಲ್‌ ಹೇಳಿದರು

“ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು” ಎಂದರು.

“ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ” ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆ ಮುಂದಿಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...