ರೈಲು ಅಪಘಾತ | ರೈಲು ಅಲ್ಲ ರೀಲ್ ಸಚಿವ; ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

Date:

ಜಾರ್ಖಂಡ್‌ನಲ್ಲಿ ನಡೆದ ಮುಂಬೈ-ಹೌರಾ ರೈಲು ಅಪಘಾತದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ರೈಲು ಅಲ್ಲ ರೀಲ್ ಸಚಿವ ಎಂದು ಕರೆದಿದ್ದಾರೆ.

- Advertisement -

ಮುಂಬೈ-ಹೌರಾ ರೈಲು ಅಪಘಾತದಲ್ಲಿ ಇಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರವ ವಿರುದ್ಧ ವಿರೋಧ ಪಕ್ಷಗಳು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರೈಲು ಸುರಕ್ಷತೆಯ ಬಗ್ಗೆ ಪ್ರಶ್ನಿಸಿದ್ದಾರೆ. “ಕೇಂದ್ರ ಸರ್ಕಾರವು ಈಗಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದಾಖಲೆಯನ್ನು ಹೊಂದಿದ್ದಾರೆ. ಈಗ ಸರ್ಕಾರವು ರೈಲು ಅಪಘಾತಗಳಲ್ಲಿ ದಾಖಲೆ ಮಾಡಲು ಕೇಂದ್ರ ಸರ್ಕಾರವು ಬಯಸುತ್ತದೆ. ಭವಿಷ್ಯದಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಸರ್ಕಾರವು ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತಾ ಸರಣಿ ರೈಲ್ವೆ ಅಪಘಾತಗಳ ಹೊಣೆಗಾರಿಕೆಯನ್ನು ಸರ್ಕಾರ ಹೊತ್ತುಕೊಳ್ಳುವಂತೆ ಮತ್ತು ಇಂತಹ ಘಟನೆಗಳನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಜಾರ್ಖಂಡ್‌ | ಹಳಿ ತಪ್ಪಿದ ಮುಂಬೈ-ಹೌರಾ ರೈಲಿನ 18 ಭೋಗಿಗಳು; ಇಬ್ಬರು ಮೃತ್ಯು

“ನಾನು ಗಂಭೀರವಾಗಿ ಕೇಳುತ್ತೇನೆ ಇದು ಆಡಳಿತವೇ? ಬಹುತೇಕ ಪ್ರತಿ ವಾರ ಸರಣಿ ರೈಲು ಹಳಿಗಳ ಮೇಲೆ ಸಾವು ನೋವು ಸಂಭವಿಸುತ್ತಿದೆ. ನಾವು ಇದನ್ನು ಎಷ್ಟು ದಿನ ಸಹಿಸಿಕೊಳ್ಳುವುದು? ಭಾರತ ಸರ್ಕಾರದ ನಿರ್ದಾಕ್ಷಿಣ್ಯಕ್ಕೆ ಅಂತ್ಯವಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ, ಈ ಅಪಘಾತಗಳು ಸರ್ಕಾರದ ನಾಚಿಕೆಗೇಡಿನ ನಿರಾಸಕ್ತಿ ಎಂದು ಆರೋಪಿಸಿದರು. ಹಾಗೆಯೇ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದರು. “ಎಷ್ಟು ಸಾವು ನೋವಾದರೂ ಯಾವುದೇ ಪ್ರಭಾವ ಬೀರಲ್ಲ. ಏನೇ ಆದರೂ ಪರಿಹಾರವನ್ನು ಘೋಷಿಸುವುದು, ತನಿಖೆಯ ಭರವಸೆ ನೀಡುವುದು, ಕೊನೆಗೆ ಇನ್‌ಸ್ಟಾಗ್ರಾಂ ರೀಲ್‌ನತ್ತ ಹೋಗುವುದು” ಎಂದು ಟೀಕಿಸಿದ್ದಾರೆ.

ಹಾಗೆಯೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ‘ರೀಲ್ ಸಚಿವ’ ಎಂದು ಕರೆದಿದ್ದಾರೆ. ರೈಲುಗಳಲ್ಲಿ ಜನದಟ್ಟಣೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. “ಜನರು ಶೌಚಾಲಯಗಳಲ್ಲಿ ಪ್ರಯಾಣಿಸುತ್ತಾರೆ ಆದರೆ ಸರ್ಕಾರವು ನಾಚಿಕೆಪಡುತ್ತಿಲ್ಲ” ಎಂದು ಹೇಳಿದರು.

ಮಂಗಳವಾರ ಮುಂಜಾನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಹೌರಾ-ಮುಂಬೈ ರೈಲುಗಳ ಕನಿಷ್ಠ 18 ಬೋಗಿಗಳು ಹಳಿತಪ್ಪಿದ್ದು ಇಬ್ಬರು ಸಾವನ್ನಪ್ಪಿದರೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...