ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್ : ಎಚ್‌ಡಿಕೆ ಆರೋಪ

Date:

  • ಹಿಂದಿನ ಸರ್ಕಾರವನ್ನು 40% ಎಂದಿದ್ದ ಕಾಂಗ್ರೆಸ್‌ ಈಗ ತನ್ನ ಅವಧಿಯಲ್ಲಿ ಏನು ಮಾಡುತ್ತಿದೆ?
  • ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ

ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ  ನೇರ ಆರೋಪ ಮಾಡಿದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಆಡಳಿತ ಪಕ್ಷದ ವಿರುದ್ಧ ಗಂಭೀರ ಅರೋಪ ಮಾಡಿದರು.

ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರ್ಕಾರದಲ್ಲಿ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? :ಬಿಜೆಪಿ ಸಭೆ | ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ; ಅಂತಿಮವಾಗದ ವಿಪಕ್ಷ ನಾಯಕ ಆಯ್ಕೆ

ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.

ಈಗ ಇವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...