ಸಿಎಂ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

Date:

  • ಕಾಂಗ್ರೆಸ್ ಸರ್ಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಎಚ್ಡಿಕೆ
  • ಸಿದ್ದರಾಮಯ್ಯ ಗೌರ್ನಮೆಂಟ್‌ನಲ್ಲಿ ಕಾಸಿಗಾಗಿ ಪೋಸ್ಟಿಂಗ್ ಎಂದ ಮಾಜಿ ಸಿಎಂ

ನಾನು ಮುಖ್ಯಮಂತ್ರಿ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದೆ ಎನ್ನುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆ ಪಿ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗ ಅಧಿಕಾರಿಗಳ ಪೋಸ್ಟಿಂಗ್ ಗೆ ಯಾರು, ಎಲ್ಲಿ ಕೂತು ರೇಟ್ ಫಿಕ್ಸ್ ಮಾಡುತ್ತಿದ್ದಾರೆ ಎನ್ನುವುದನ್ನು ಅಧಿಕಾರಿಗಳೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಜತೆ ನಾನು ಸರ್ಕಾರ ಮಾಡಿದ್ದಾಗ ಕಾಂಗ್ರೆಸ್ ನವರು ಹೇಳಿದ ಮೇಲೆ ವರ್ಗಾವಣೆ ಮಾಡಬೇಕು ಎನ್ನುವ ಪರಿಸ್ಥಿತಿ ಇತ್ತು ಎಂದರು.

2018ರಲ್ಲಿ ಸಿಎಂ ಆಗಿದ್ದಾಗ ನನ್ನ ಸಂಪುಟದ ಸಚಿವರಾಗಿದ್ದ ಕಾಂಗ್ರೆಸ್ ನಾಯಕರೊಬ್ಬರು ಸೋಪ್ ಅಂಡ್ ಡಿಟರ್ಜಂಟ್ ಕಾರ್ಖಾನೆಗೆ ಅಧಿಕಾರಿ ಒಬ್ಬರನ್ನು ವರ್ಗ ಮಾಡುವಂತೆ ಕೇಳಿದ್ದರು. ಈ ವಿಷಯದಲ್ಲಿ ನಡೆದ ಗಲಾಟೆ ನನ್ನ ಸರಕಾರವನ್ನು ಬಲಿ ತೆಗೆದುಕೊಂಡಿತು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಅಂದಿನಂತೆ ಇಂದಿನ ಸರ್ಕಾರದಲ್ಲೂ ವರ್ಗಾವಣೆ ದಂಧೆ ಆರಂಭವಾಗಿದೆ, ಕಾಸಿಗಾಗಿ ಇವರು ಪೋಸ್ಟಿಂಗ್ ಮಾಡುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿರುವ ಮಂತ್ರಿಗೆ ಗೊತ್ತಿಲ್ಲದೆ ಸಿಎಂ ಒಬ್ಬ ಅಧಿಕಾರಿಯನ್ನು ಅವರ ಇಲಾಖೆಗೆ ಪೋಸ್ಟಿಂಗ್ ಮಾಡಿದ್ದಾರೆ. ಆತ ಅಲ್ಲಿಂದಲೇ ನಾನು ಬರೋವರೆಗೆ ಚಾರ್ಜ್ ತಗೋಬೇಡ ಎಂದು ಹೇಳಿದ್ದಾರಂತೆ, ಇದು ಇವರ ಸರ್ಕಾರದ ಕಾರ್ಯವೈಖೃರಿ, ಈಗ ನಡೆಯುತ್ತಿರುವುದು ʼವರ್ಗಾವಣೆ ಜ್ಯೋತಿʼ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ತಾವೇ ಕಾಸಿಗಾಗಿ ವರ್ಗಾವಣೆ ದಂಧೆ ಮಾಡುತ್ತಿರುವವರು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಇನ್ನು ಸರ್ಕಾರದ ಪರ್ಸೆಂಟೇಜ್ ಆಡಳಿತದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಅವರು, ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?:ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ 675 ಕೋಟಿ ಮೊತ್ತದ ಟೆಂಡರ್ ನೀಡಲಾಗಿತ್ತು. ಆದರೆ ಅದರ ಎಲ್ ಒಸಿ ಹಣ ಇನ್ನೂ ಬಿಡುಗಡೆ ಆಗಲಿಲ್ಲ. ಹೀಗೆ ಏಕೆ ಆಗುತ್ತಿದೆ ಎನ್ನುವುದು ಅನುಮಾನಕ್ಕೆ ಕಾರಣ. ಈಗ ಎಲ್ಒಸಿ ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಈ ಸರ್ಕಾರದವರು ಡಿಮ್ಯಾಂಡ್ ಇಟ್ಟಿದ್ದಾರೆ.

40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಬಿಜೆಪಿ ಸರಕಾರದ ಬಗ್ಗೆ 40 ಪರ್ಸೆಂಟ್ ಬಗ್ಗೆ ಮಾತಾಡಿದ್ದರು ಇವರು. ಹಾದಿಬೀದಿಯಲ್ಲಿ ಜಾಗಟೆ ಹೊಡೆದುಕೊಂಡು ಪ್ರಚಾರ ಮಾಡಿದರು. ಈಗ ನೋಡಿದರೆ ಅಧಿಕಾರಿಗಳ ವರ್ಗಾವಣೆ, ಎಲ್ ಒಸಿ ದಂಧೆ ಶುರು ಮಾಡಿಕೊಂಡಿದ್ದಾರೆ. 40 ಪರ್ಸೆಂಟ್ ಎಂದು ಪುಂಗಿ ಬಿಟ್ಟ ಇವರು ಆ ಆರೋಪವನ್ನು ಸಾಬೀತು ಮಾಡಿದ್ರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕನ್ನಡಿ (mirror) ಮುಂದೆ ನಿಂತುಕೊಂಡು ಮಾತನಾಡಯಾ.
    ನೀನೂ ನಿನ್ನ ಮಾತು ಸಾಕು.
    Election ಗು ಮುಂಚೆ ಏನು ಹೇಳಿದ್ದೋ ಅದನ್ನು ಮಾಡು…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...