ದೇಶದಲ್ಲಿಯೇ ಮುಂಚೂಣಿ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ಕೆಎಸ್‌ಆರ್‌ಟಿಸಿಯದ್ದು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

Advertisements
  • ಕೆಎಸ್‌ಆರ್‌ಟಿಸಿಯ 62ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
  • ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ

‘ಸಾರ್ವಜನಿಕರಿಗೆ ಸಮರ್ಪಕವಾದ ಸೇವೆಯನ್ನು ಒದಗಿಸುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಸಾರಿಗೆ ಸಂಸ್ಥೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಿಗಮದ 62ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

‘ಕೋವಿಡ್ ಸಂದರ್ಭದಲ್ಲಿ ಉಂಟಾದ ಆರ್ಥಿಕ ಸಂಕಷ್ಟದಿಂದ ನೂತನ ವಾಹನಗಳನ್ನು ಖರೀದಿಸಲಾಗದ ಪರಿಸ್ಥಿತಿಯಲ್ಲಿದ್ದಾಗ 8 ರಿಂದ 9 ಲಕ್ಷ ಕಿ.ಮಿ. ಕ್ರಮಿಸಿದ ತನ್ನ ಹಳೆಯ ಕವಚ ದುರಸ್ತಿ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ. ಆ ಮೂಲಕ ಇನ್ನೂ ಆ ವಾಹನಗಳನ್ನು 4-5 ಲಕ್ಷ ಕಿ.ಮಿ.ವರೆಗೆ ಕಾರ್ಯಾಚರಣೆಗೊಳಿಸಲು ಯೋಜನೆಯನ್ನು ರೂಪಿಸಿ, ಹಳೆಯ ವಾಹನಗಳನ್ನು ಹೊಸ ವಾಹನಗಳಂತೆ ಪರಿವರ್ತಿಸಿ ಚಾಲನೆಗೆ ಬಳಸಿಕೊಳ್ಳುತ್ತಿರುವುದು ಖುಷಿ ಕೊಟ್ಟಿದೆ’ ಎಂದು ಸಿಬ್ಬಂದಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.

Advertisements

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿನ ಲಭ್ಯವಿರುವ ಅನುಕಂಪಕದ ಅವಲಂಬಿತ ಖಾಲಿ ಹುದ್ದೆಗಳನ್ನು ಯಾವುದೇ ವಿಳಂಬವಿಲ್ಲದೇ ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ ಯೋಜನೆ’ಯು ಮಹಿಳೆಯರ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ಆದರೆ ಉಚಿತ ಪ್ರಯಾಣ ಕೊಟ್ಟಿರುವುದು ಕೆಲವರಿಗೆ ತಡೆಯಲಿಕ್ಕಾಗುತ್ತಿಲ್ಲ. ಪ್ರತಿದಿನ ನಾಲ್ಕೂ ನಿಗಮದಲ್ಲಿ ಒಂದು ಲಕ್ಷದ ಐವತ್ತಾರು ಸಾವಿರ ಟ್ರಿಪ್ ನೀಡಲಾಗುತ್ತಿದೆ. ಯಾವುದಾದರೊಂದು ಸಣ್ಣ ಘಟನೆ ಆಗಿಬಿಟ್ಟರೆ ಅದನ್ನೇ ದೊಡ್ಡದು ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಹಾಕಲಾಗುತ್ತಿದೆ. ಆದರೆ ಎಲ್ಲ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ. ಇದಕ್ಕೆ ಸಿಬ್ಬಂದಿಯ ಪ್ರಯತ್ನ ಕೂಡ ಕಾರಣ’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸಮಾರಂಭದಲ್ಲಿ ಅಪಘಾತ ಪರಿಹಾರ ನಿಧಿ ಯೋಜನೆಯಡಿ 20 ನೂತನ ಬೊಲೆರೋ ವಾಹನಗಳ ಸೇರ್ಪಡೆ, ‘ಶಕ್ತಿ’ ಯೋಜನೆಯ ಕುರಿತ ವಿಶೇಷ ಆಂತರಿಕ ನಿಯತಕಾಲಿಕ ‘ಸಾರಿಗೆ ಸಂಪದ’ ಬಿಡುಗಡೆ, ಸಾರಿಗೆ ಮಿತ್ರ ಹೆಚ್.ಆರ್.‌ಎಂ.ಎಸ್‌ ಯೋಜನೆ ಹಾಗೂ ಸಾರಿಗೆ ವಿದ್ಯಾ ಚೇತನ ಯೋಜನೆಗೆ ಚಾಲನೆ, ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಜಿ, ಆಡಳಿತ ಮಂಡಳಿ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X