ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

Date:

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಬಿಜೆಪಿ ಶಾಸಕ ನೀಲಿ ಚಿತ್ರ (ಪೋರ್ನ್‌) ವೀಕ್ಷಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಗುರುವಾರ, ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್, ಪೋರ್ನ್ ವೀಕ್ಷಣೆಯಲ್ಲಿ ತೊಡಗಿದ್ದರು. ಇದನ್ನ ಗಮನಿಸಿದ ಗ್ಯಾಲರಿಯಲ್ಲಿ ಕುಳಿತಿದ್ದವರು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಧಾನಸಭೆ ಕಲಾಪದ ನಡುವೆಯೇ ತಮ್ಮ ಮೊಬೈಲ್‌ನಲ್ಲಿ ಆಶ್ಲೀಲ ವಿಡಿಯೋ ವೀಕ್ಷಣೆಯಲ್ಲಿ ಮುಳುಗಿದ್ದ ಜದಾಬ್ ಲಾಲ್ ನಾಥ್, ಹಲವು ವಿಡಿಯೋಗಳನ್ನು ಸ್ಕ್ರಾಲ್ ಮಾಡುತ್ತಿರುವುದು ಮತ್ತು ಇದೇ ವೇಳೆ ಸ್ಪೀಕರ್ ಬಿಸ್ವಾ ಬಂಧು ಸೇನ್ ಕಲಾಪವನ್ನು ನಿಯಂತ್ರಿಸುವ ಮಾತುಗಳು ವೈರಲ್‌ ವಿಡಿಯೋದಲ್ಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಎನ್‌ಕೌಂಟರ್‌ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸಲು ಸಿಬಿಐ ಒತ್ತಡವಿತ್ತು: ಅಮಿತ್‌ ಶಾ

ಬಿಜೆಪಿ ಶಾಸಕನ ಕೃತ್ಯಕ್ಕೆ ತರಹಾವೇರಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಇದೊಂದು  ನಾಚಿಕೆಗೇಡಿನ ಸಂಗತಿ ಎಂದು ನೆಟ್ಟಿಗರು ಉಗಿದಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ, ಶಾಸಕ ಜದಾಬ್ ಲಾಲ್ ನಾಥ್‌ಗೆ ಶೋಕಾಸ್‌ ನೋಟಿಸ್‌ ನೀಡಿದೆ.

ಉತ್ತರ ತ್ರಿಪುರಾ ಜಿಲ್ಲೆಯ ಬಾಗ್‌ಬಾಸಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜದಾಬ್ ಲಾಲ್ ನಾಥ್, ಸಿಪಿಐಎಂನ ಬಿಜಿತಾ ನಾಥ್ ಅವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ತ್ರಿಪುರಾ ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ, “ಘಟನೆ ಕುರಿತು ವಿವರಣೆ ಕೇಳಿ ಶಾಸಕರಿಗೆ ಪಕ್ಷದ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಶಾಸಕರ ಪ್ರತಿಕ್ರಿಯೆಯಿಂದ ತೃಪ್ತಿಕರವಾಗಿರದಿದ್ದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಸರಿಯಾಗಿ ತನಿಖೆ ಮಾಡಬೇಕಾಗಿದೆ” ಎಂದಿದ್ದಾರೆ.

ಸದನದಲ್ಲಿ ಸದಸ್ಯರು ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬೀಳುತ್ತಿರುವುದು ಇದು ಮೊದಲೇನಲ್ಲ. 2012 ಫೆಬ್ರವರಿ 7ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾಗಿದ್ದ ಲಕ್ಷ್ಮಣ ಸವದಿ, ಸಿಸಿ ಪಾಟೀಲ ಹಾಗೂ ಕೃಷ್ಣ ಪಾಲೇಮಾರ್ ಕಲಾಪ ನಡೆಯುತ್ತಿದ್ದ ವೇಳೆಯೇ ಮೊಬೈಲ್‌ನಲ್ಲಿ ಹಸಿ ಬಿಸಿ ದೃಶ್ಯ ವೀಕ್ಷಿಸುವುದರಲ್ಲಿ ತಲ್ಲೀನರಾಗಿದ್ದರು. ಇದು ದೇಶಾದ್ಯಂತ ಭಾರಿ ಸುದ್ದಿಯಾಗಿತ್ತು. ಇದಾದ ಬಳಿಕ 2021ರಲ್ಲಿ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ ಎಂಎಲ್ ಸಿ ಪ್ರಕಾಶ್ ರಾಥೋಡ್, ತಮ್ಮ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಸುದ್ದಿಯಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...