ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಪೊಲೀಸರು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಆಕ್ಷೇಪಿಸಿದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ಬೆಂಗಳೂರಿನ “ಟೌನ್ ಹಾಲ್”ನಿಂದ ತಿರಂಗಾ ಯಾತ್ರೆಗೆ ಆಯೋಜಿಸಲಾಗಿತ್ತು. ಅನುಮತಿ ಪಡೆದಿಲ್ಲ ಎಂದು ಬಿಜೆಪಿ ತಿರಂಗಾ ಯಾತ್ರೆಗೆ ಅನುಮತಿ ಪಡೆದಿಲ್ಲ ಎಂದು ರಾಷ್ಟ್ರಧ್ವಜವನ್ನು ಪೊಲೀಸ್ ಜೀಪ್ನಲ್ಲಿ ಮೂಟೆ ಕಟ್ಟಿದ ರೀತಿಯಲ್ಲಿ ತುಂಬಿ ಕೊಂಡೊಯ್ದರು.
“ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ತಿರಂಗಾ ಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು ಖಂಡನೀಯ ಎಂದು ಹೇಳಿದರು. ಪ್ರಜಾಪ್ರಭುತ್ವದ ದೇವಾಲಯ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾರೆ. ಬಳಿಕ ಬಾಂಬ್ ಸ್ಫೋಟವೂ ಆಗಿದೆ” ಎಂದು ಪ್ರತಿಭಟನಾಕಾರರು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಪಾಕ್ ಪರ ಘೋಷಣೆ ಆರೋಪ | ಮೂವರನ್ನು ಬಂಧಿಸಿದ ವಿಧಾನಸೌಧ ಪೊಲೀಸರು
ಕೆಲವು ಹೊತ್ತು ಟೌನ್ ಹಾಲ್ ಮುಂದೆ ಘೋಷಣೆ ಕೂಗಿದ ಯುವ ಮೋರ್ಚಾ ಕಾರ್ಯಕರ್ತರು ವಾಪಸ್ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡೊಯ್ದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು, ಶಾಸಕ ಕೆ.ಸಿ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪಕ್ಷದ ಮುಖಂಡರು, ಯುವಮೋರ್ಚಾ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
