ಸತ್ಯ, ಅಹಿಂಸೆ ನನ್ನ ಧರ್ಮ: ತೀರ್ಪಿನ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

Date:

Advertisements
  • ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
  • ರಾಹುಲ್ ದೆಹಲಿ ನಿವಾಸದೆದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಉಪನಾಮ ಟೀಕೆಗೆ ಸಂಬಂಧಿಸಿ ಗುಜರಾತ್‌ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಧರ್ಮ ಸತ್ಯ ಹಾಗೂ ಅಹಿಂಸೆಯ ಆಧಾರಿತವಾಗಿದೆ. ಸತ್ಯವೇ ನನ್ನ ದೇವರು, ಅಹಿಂಸೆ ಆ ದೈವತ್ವ ಸಾಧಿಸಲು ಇರುವ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Advertisements

ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಸೂರತ್ ನ್ಯಾಯಾಲಯದ ತೀರ್ಪು ಖಂಡಿಸಿ ದೆಹಲಿಯಲ್ಲಿ ರಾಹುಲ್ ಅವರ ನಿವಾಸದ ಎದುರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಹುಲ್ ಅವರ ಬರುವಿಕೆಗೆ ಕಾಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು “ರಾಹುಲ್ ಗಾಂಧಿ ಅವರೇ ಸತ್ಯ, ಸತ್ಯವೆಂದರೆ ರಾಹುಲ್ ಗಾಂಧಿ” ಎಂದು ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು.

ಕೇಂದ್ರದ ಹೇಡಿತನ, ಸರ್ವಾಧಿಕಾರ ಧೋರಣೆ

ರಾಹುಲ್ ಅವರ ವಿರುದ್ಧದ ಸೂರತ್ ನ್ಯಾಯಾಲಯದ ತೀರ್ಪನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

“ನ್ಯಾಯಾಲಯ ರಾಹುಲ್ ಅವರನ್ನು ದೋಷಿ ಎಂದು ಕರೆದಿದೆ. ಇದು ಕೇಂದ್ರ ಸರ್ಕಾರದ ಹೇಡಿತನ, ಸರ್ವಾಧಿಕಾರ ಧೋರಣೆಯಾಗಿದೆ. ಬಿಜೆಪಿ ಸರ್ಕಾರವನ್ನು ರಾಹುಲ್ ಅವರು ಕುಟುಕಿದ ಪರಿಣಾಮ ಇದಾಗಿದೆ. ಇದರ ವಿರುದ್ಧ ನಾವು ಹೈಕೋರ್ಟ್‌ಗಳಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

“ಅವರು ಒಂದು ಬೆರಳನ್ನು ಬೇರೆಯವರ ತಡೆ ತೋರಿಸಿದರೆ, ಉಳಿದ ನಾಲ್ಕು ಬೆರಳುಗಳು ಅವರ ಕಡೆ ತಿರುಗಿರುತ್ತವೆ ಎಂಬುದನ್ನು ಮರೆಯಬಾರದು” ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

“ಸರ್ವಾಧಿಕಾರಿ ಆಡಳಿತದ ವಿರುದ್ಧ ರಾಹುಲ್ ಧ್ವನಿ ಎತ್ತುತ್ತಿರುವುದು ಎಲ್ಲರಿಗೂ ತಿಳಿದಿದೆ. ಧೈರ್ಯವಾಗಿ ತಪ್ಪನ್ನು ತಪ್ಪು ಎಂದು ಹೇಳುತ್ತಾರೆ. ರಾಹುಲ್ ಅವರ ಈ ಧೈರ್ಯದಿಂದ ಸರ್ವಾಧಿಕಾರಿ ಕಂಗೆಟ್ಟಿದ್ದಾರೆ. ಕೆಲವೊಮ್ಮೆ ಇ.ಡಿ, ಮತ್ತೊಮ್ಮೆ ಪೊಲೀಸ್, ಮಗದೊಮ್ಮೆ ಶಿಕ್ಷೆಗೆ ಒಳಪಡಿಸುವ ಮೂಲಕ ಅವರನ್ನು ಬೆದರಿಸುವ ಯತ್ನ ನಡೆಸಲಾಗುತ್ತಿದೆ. ಇದರ ವಿರುದ್ಧ ನಾವು ಹೋರಾಡಿ ಗೆಲ್ಲುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ರಾಹುಲ್‌ ಧ್ವನಿ ಅಡಗಿಸಲು ಪ್ರಯತ್ನ’

“ಭಯದಲ್ಲಿರುವ ಆಡಳಿತ ಯಂತ್ರವು ಸಾಮ, ದಾನ, ದಂಡ, ಭೇದದ ಮೂಲಕ ರಾಹುಲ್ ಗಾಂಧಿ ಅವರ ದನಿ ಅಡಗಿಸಲು ಪ್ರಯತ್ನಿಸುತ್ತಿದೆ” ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮೆರವಣಿಗೆ ನಡೆಸುವ ವೇಳೆ, “ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮ ಏಕೆ ಇರುತ್ತದೆ” ಎಂದು ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದರು. ರಾಹುಲ್ ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ’ ಉಪನಾಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಗುರುವಾರ (ಮಾರ್ಚ್ 24) ಅರ್ಜಿಯ ವಿಚಾರಣೆ ನಡೆಸಿದ ಸೂರತ್‌ ನ್ಯಾಯಾಲಯ ‘ಮೋದಿ’ ಉಪನಾಮ ಟೀಕೆಗಳಿಗೆ ಸಂಬಂಧಿಸಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತು. ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.

ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ, ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು. ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ರಾಹುಲ್‌ ಅವರಿಗೆ ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.

ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಹುಲ್‌ ಅವರನ್ನು ದೋಷಿ ಎಂದಿರುವ ಸೂರತ್ ನ್ಯಾಯಾಲಯದ ತೀರ್ಪಿನ ಪರಿಣಾಮ ರಾಹುಲ್ ಅವರು ತಮ್ಮ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಜನಪ್ರತಿನಿಧಿಗಳ ಕಾಯ್ದೆಯ ಪ್ರಕಾರ, ಯಾವುದೇ ಜನಪ್ರತಿನಿಧಿಯನ್ನು ಯಾವುದೇ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿ, 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದರೆ, ಅಂತಹ ಜನಪ್ರತಿನಿಧಿಯನ್ನು ಸದನದಿಂದ ಅನರ್ಹಗೊಳಿಸಲಾಗುತ್ತದೆ ಹಾಗೂ ಚುನಾಯಿತ ಅವಧಿ ಮುಕ್ತಾಯಗೊಂಡ ಬಳಿಕ 6 ವರ್ಷಗಳ ಕಾಲ ಅನರ್ಹತೆ ಎದುರಿಸಬೇಕಾಗುತ್ತದೆ.

5d4d09db59db7dd57fe9e8598de7b91a?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X