ನಮ್ಮ ಬಾಯಿ ಮುಚ್ಚಿಸಲು ಯತ್ನ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್‌.ಅಶೋಕ್‌

Date:

ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್‌ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ” ಎಂದು ಪ್ರಶ್ನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿರೋಧ ಪಕ್ಷದ ನಾಯಕನಾಗಿ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ವಿರೋಧ ಪಕ್ಷವನ್ನು ಬಗ್ಗುಬಡಿಯಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಪಾಕ್‌ ಜಿಂದಾಬಾದ್‌ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಸಚಿವರು ರಾಜೀನಾಮೆ ನೀಡಬೇಕಿತ್ತು. ಹಾಗಾದರೆ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕು?”ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

“ಕಾಂಗ್ರೆಸ್‌ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಲು ಮುಂದಾಗಿದೆ. ಆದರೆ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಪೊಲೀಸರನ್ನು ಬೊಂಬೆಯಂತೆ ಆಡಿಸುತ್ತಿದ್ದಾರೆ. ಈ ಸರ್ಕಾರ ರಾಜ್ಯಪಾಲರನ್ನೂ ಬಿಟ್ಟಿಲ್ಲ. ಅವರ ಮೇಲೂ ಗದಾ ಪ್ರಹಾರ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರ ಅಧಿಕಾರ ಕಸಿಯಲು ಸರ್ಕಾರ ಮುಂದಾಗಿದೆ. ನಾವು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದ್ದೆವು. ಹೀಗಾಗಿ ಈ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....