ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

Date:

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸಲಾಗಿದೆ. ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಒತ್ತಾಯಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
WhatsApp Image 2025 10 26 at 2.43.44 PM

“ಸಂಘಪರಿವಾರ ಮತ್ತು ಅದರ ಕೋಮುವಾದದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್‌ ಸಮರ ಸಾರಿದೆ. ಇಂತಹ ಸಂದರ್ಭದಲ್ಲಿ, ಕಾಂಗ್ರೆಸ್‌ ಶಾಸಕ ಷಡಕ್ಷರಿ ಅವರು ಸಂಘಪರಿವಾರದ ಕಟ್ಟಾ ಕಾರ್ಯಕರ್ತನಾಗಿರುವ ಡಾ. ಶೀಧರ್ ಅವರನ್ನು ‘ಯಶಸ್ವಿನಿ ಟ್ರಸ್ಟ್‌’ಗೆ ಶಿಫಾರಸು ಮಾಡಿದ್ದಾರೆ. ಷಡಕ್ಷರಿ ಅವರ ನಡೆಯು ಪಕ್ಷದ ಸಿದ್ಧಾಮತಗಳಿಗೆ ವ್ಯತಿರಿಕ್ತವಾಗಿದೆ. ಕೋಮುವಾದಿಗಳ ಪರ ಎನ್ನಿಸಿಕೊಂಡಿರುವ ಶಾಸಕರ ಇಂಥ ಧೋರಣೆಯನ್ನು ಸಹಿಸಲು ಅಸಾಧ್ಯ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿದ ಪ್ರಶಾಂತ್ ಕಿಶೋರ್ ತಂತ್ರವೇನು?

“ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೇ ‘ಯಶಸ್ವಿನಿ ಟ್ರಸ್ಟ್‌’ಗೆ ಪ್ರಧಾನ ಪೋಷಕರಾಗಿದ್ದಾರೆ. ಆದರೂ, ಈ ಟ್ರಸ್ಟ್‌ಗೆ ಸಂಘಪರಿವಾದ ಕಾರ್ಯಕರ್ತನನ್ನು ಟ್ರಸ್ಟಿಯಾಗಿ ನೇಮಿಸಿ ಸುತ್ತೋಲೆ ಹೊರಡಿಸಲಾಗಿದೆ. ಈ ಸುತ್ತೋಲೆಯನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಗಮನಸಿಲ್ಲವೇ? ಈ ಸುತ್ತೋಲೆಯು ತುಮಕೂರು ಮತ್ತು ತಿಪಟೂರಿನ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ. ಆಕ್ರೋಶಕ್ಕೆ ಕಾರಣವಾಗಿದೆ” ಎಂದಿದ್ದಾರೆ.

“ಡಾ. ಶ್ರೀಧರ್ ಅವರ ನೇಮಕವು ಕಾಂಗ್ರೆಸ್‌ನ ಕೋಮುವಾದ ವಿರೋಧಿ ನಿಲುವಿಗೆ, ಸಾಮರಸ್ಯ ನೀತಿಗೆ ಹಾಗೂ ಘನತೆಗೆ ಚ್ಯುತಿ ತಂದಂತಾಗಿದೆ. ಕೂಡಲೇ, ನೇಮಕಾತಿ ಸುತ್ತೋಲೆಯನ್ನು ವಾಪಸ್ ಪಡೆದುಕೊಳ್ಳಬೇಕು. ಡಾ. ಶ್ರೀಧರ್ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....