ಬಾಪಟ್ಲದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ

Date:

ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ.

- Advertisement -

ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ, ಉದ್ಯಮಿ ಪ್ರಶಾಂತರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಅವರನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆಂಧ್ರಪ್ರದೇಶ ಮೂಲದ ಬಿಲ್ಡರ್‌ಗಳಾದ ಮಾದವರೆಡ್ಡಿ ಮತ್ತು ಅನಿಲ್‌ ರೆಡ್ಡಿ ವಿರುದ್ಧ ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆಗಾಗಿ ಬಾಪಟ್ಲಗೆ ತೆರಳಿದ್ದರು. ನ್ಯಾಯಾಲಯದ ಆವರಣದಲ್ಲಿ ಈ ಇಬ್ಬರನ್ನೂ ಆರೋಪಿಗಳಾದ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ಮಾತುಕತೆಗೆ ಕರೆದಿದ್ದರು ಎಂದು ಹೇಳಲಾಗಿದೆ.

ಮಾತುಕತೆ ವೇಳೆ, ಇಬ್ಬರನ್ನೂ ಆರೋಪಿಗಳು ಕಾರಿನಲ್ಲಿ ಹತ್ತಿಸಿಕೊಂಡು, ಅಪಹರಿಸಿದ್ದಾರೆ ಎನ್ನಲಾಗಿದೆ. ಇಬ್ಬರ ಮೃತದೇಹಗಳು ಬಾಪಟ್ಲದ ಹೆದ್ದಾರಿ ಬಳಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....