ಪ್ರತಿಭಟನೆಯಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಸಾವು; ಪೊಲೀಸರ ದೌರ್ಜನ್ಯ ಆರೋಪ

Date:

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬುಧವಾರ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದು, ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಮೃತರನ್ನು ಪ್ರಭಾತ್ ಪಾಂಡೆ ಮತ್ತು ಮೃದುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ವಿವಿಧ ಸಮಸ್ಯೆಗಳ ವಿರುದ್ಧ ನಡೆದ ಪ್ರತಿಭಟನೆ ನಡೆಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. “ಪೊಲೀಸ್ ದೌರ್ಜನ್ಯದಿಂದಾಗಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಅಶ್ರುವಾಯುವಿನಿಂದ ಗಾಯಗೊಂಡಿದ್ದರು” ಎಂದು ಕಾಂಗ್ರೆಸ್ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅಕ್ರಮ ಗಣಿಗಾರಿಕೆ | ಲೂಟಿಕೋರರ ಪರ ನಿಂತಿರುವ ಕಾಂಗ್ರೆಸ್ ಸರ್ಕಾರ: ಎಎಪಿ ಆರೋಪ

ಉತ್ತರ ಪ್ರದೇಶ ವಿಧಾನಸಭೆ ಬಳಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತ ಪ್ರಭಾತ್ ಪಾಂಡೆ ‘ಪೊಲೀಸ್ ದೌರ್ಜನ್ಯದಿಂದ’ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ದೂರಿದ್ದಾರೆ.

ಗೋರಖ್‌ಪುರ ಮೂಲದ 28 ವರ್ಷದ ಪ್ರಭಾತ್ ಪಾಂಡೆ ಅವರು ಪ್ರತಿಭಟನೆ ಬಳಿಕ ತೀವ್ರ ಆಯಾಸಗೊಂಡು ಕಾಂಗ್ರೆಸ್ ಕಚೇರಿಯಲ್ಲಿದ್ದು. ಅಲ್ಲಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಯಲ್ಲಿ ಪ್ರಭಾತ್ ಸಾವನ್ನಪ್ಪಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅಜಯ್ ರೈ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಮೋದಿ ಸರ್ಕಾರದ ನೂತನ ಸಂಹಿತೆ ಕಾಂಗ್ರೆಸ್ ಜಾರಿ ಮಾಡಿದರೆ ವಿಧಾನಸೌಧಕ್ಕೆ ಲಗ್ಗೆ – ಸಿಐಟಿಯು

“ವೈದ್ಯರ ಪ್ರಕಾರ ದೇಹದಲ್ಲಿ ಯಾವುದೇ ಗಾಯದ ಗುರುತು ಇರಲಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಸೆಂಟ್ರಲ್ ಲಕ್ನೋ ಡಿಸಿಪಿ ರವೀನಾ ತ್ಯಾಗಿ ಹೇಳಿದ್ದಾರೆ.

ಅಸ್ಸಾಂನಲ್ಲೂ ಕಾಂಗ್ರೆಸ್ ಕಾರ್ಯಕರ್ತ ಸಾವು

ಪ್ರತಿಭಟನೆಯ ವೇಳೆ ಅಶ್ರುವಾಯು ಹೊಗೆಯಿಂದ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಲೀಗಲ್ ಸೆಲ್ ಸದಸ್ಯ ಮೃದುಲ್ ಇಸ್ಲಾಂ ಅವರ ಬಳಿ ಅಶ್ರುವಾಯು ಬಿದ್ದಿದೆ. ಇದರಿಂದಾಗಿ ಅವರು ಉಸಿರುಗಟ್ಟಿ ಸಾವನ್ನಪ್ಪಿದರು ಎಂದು ಕಾಂಗ್ರೆಸ್ ವಕ್ತಾರ ಬೇಡಬ್ರತ್ ಬೋರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಎರಡು ಘಟನೆಗಳ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿ ಆಡಳಿತವಿರುವ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮತ್ತೆ ಕೊಲೆ ಮಾಡಲಾಗಿದೆ. ದೇಶಾದ್ಯಂತ ಬಾಬಾಸಾಹೇಬ್ ಮತ್ತು ಸಂವಿಧಾನವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಸತ್ಯಾಗ್ರಹ ನಡೆಸುತ್ತಿದೆ. ಈ ಸಮಯದಲ್ಲಿ, ಗುವಾಹಟಿಯಲ್ಲಿ ಮೃದುಲ್ ಇಸ್ಲಾಂ ಮತ್ತು ಲಕ್ನೋದಲ್ಲಿ ಪ್ರಭಾತ್ ಪಾಂಡೆ ಎಂಬ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬಲದಿಂದಾಗಿ ಸಾವಿಗೀಡಾಗಿರುವುದು ತುಂಬಾ ದುಃಖಕರ ಮತ್ತು ಖಂಡನೀಯ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...