ವಿಧಾನಸಭೆಯಲ್ಲಿ ಎರಡು ದಿನ ‘ಗದ್ದಲ’; 18 ಬಿಜೆಪಿ ಶಾಸಕರ ಅಮಾನತು

Date:

ಜಾರ್ಖಂಡ್ ವಿಧಾನಸಭೆಯಲ್ಲಿ ಎರಡು ದಿನಗಳ ಕಲಾಪಕ್ಕೆ ಅಡ್ಡಿಪಿಸಿದ ಅಲ್ಲಿನ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ. ಬುಧವಾರದಿಂದ ಬಿಜೆಪಿ ಶಾಸಕರು ಸದನದ ಆವರಣದಲ್ಲಿ ಮಲಗಿದ್ದರು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ತಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಉತ್ತರಿಸಬೇಕೆಂದು ಅವರು ಪಟ್ಟುಹಿಡಿದಿದ್ದರು.

- Advertisement -

ವಿಧಾನಸಭೆಯ ಇತಿಹಾಸದಲ್ಲಿ ಈ ಎರಡು ದಿನಗಳು ‘ಕಪ್ಪು ಅಧ್ಯಾಯ’ವಾಗಿವೆ ಎಂದು ವಿಧಾನಸಭೆ ಸ್ಪೀಕರ್ ರವೀಂದ್ರ ನಾಥ್ ಮಹತೋ ಹೇಳಿದ್ದಾರೆ. ‘ಹುದ್ದಂಗಿ’ (ಗದ್ದಲ) ಸೃಷ್ಟಿಸಿದ ಕಾರಣಕ್ಕಾಗಿ 18 ಬಿಜೆಪಿ ಶಾಸಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ, ಈ ಅಮಾನತು ಆದೇಶವನ್ನು ಬಿಜೆಪಿ ‘ಪ್ರಜಾಪ್ರಭುತ್ವದ ಕೊಲೆ’ ಎಂದು ಕರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬುಧವಾರ, ತಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸೋರೆನ್ ಉತ್ತರಿಸಬೇಕೆಂದು ಬಿಜೆಪಿ ಶಾಸಕರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗಿದ್ದರಿಂದಾಗಿ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಯಾಯಿತು. ಹೇಮಂತ್ ಸೊರೇನ್ ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವುದಾಗಿ ಹೇಳಿದರೂ, ಶಾಸಕರು ಸುಮ್ಮನಾಗಲಿಲ್ಲ. ಅವರು ರಾತ್ರಿಯಿಡೀ ವಿಧಾನಸಭೆಯಲ್ಲಿ ಇದ್ದರು. ಮರುದಿನ ಅವರು ಮತ್ತೆ ಪ್ರತಿಭಟನೆ ಆರಂಭಿಸಿದರು. ಗದ್ದಲದಿಂದಾಗಿ ಕಲಾಪವನ್ನು ಅಲ್ಪಾವಧಿಗೆ ಮುಂದೂಡಲಾಯಿತು. ವಿರಾಮದ ನಂತರ, ಅವರು ಸದನಕ್ಕೆ ಬ್ಯಾನರ್‌ ತೆಗೆದುಕೊಂಡು ಬಂದರು. ಅವರನ್ನು ಸದನದಿಂದ ಹೊರಗೆ ಕಳಿಸಲು ಮಾರ್ಷಲ್‌ಗಳನ್ನು ಕರೆಸಬೇಕಾಯಿತು” ಎಂದು ಸ್ಪೀಕರ್ ಮಹತೋ ಹೇಳಿದ್ದಾರೆ.

“ಶಾಸಕರು ವಿಧಾನಸಭೆಯನ್ನು ಅಪಹಾಸ್ಯ ಮಾಡಲು ಸಾಮಾಜಿಕ ಮಾಧ್ಯಮವನ್ನು ಬಳಸಿದ್ದಾರೆ. ಇದು ಜಾರ್ಖಂಡ್ ವಿಧಾನಸಭೆಯ ಇತಿಹಾಸದಲ್ಲಿ ಒಂದು ಕಪ್ಪು ಅಧ್ಯಾಯವಾಗಿದೆ. ನಾವು ಈ ವಿಷಯಗಳ ಬಗ್ಗೆ ಮೌನವಾಗಿರಲು ಸಾಧ್ಯವಿಲ್ಲ. ಯಾಕೆಂದರೆ, ಮೌನವಾಗಿದ್ದರೆ, ಈ ಮನಸ್ಥಿತಿ ಶಾಶ್ವತವಾಗಿ ಬೇರೂರುತ್ತದೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

“ಜಾರ್ಖಂಡ್‌ನ ಜನರ ಧ್ವನಿಯಾಗಿರುವ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸ್ಪೀಕರ್ ತಮ್ಮ ಅಧಿಕಾರವನ್ನು ಬಳಸುತ್ತಿದ್ದಾರೆ. ಸಭಾಧ್ಯಕ್ಷರು ಸರ್ಕಾರಿ ನೌಕರರಂತೆ ವರ್ತಿಸುತ್ತಿದ್ದಾರೆ. ಯಾವ ನಿಯಮಗಳ ಅಡಿಯಲ್ಲಿ ಶಾಸಕರನ್ನು ಅಮಾನತುಗೊಳಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ. ನಾವು ಯುವಕರ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೆವು. ಹೇಮಂತ್ ಸೊರೇನ್ ಅವರ ಬಳಿ ಯಾವುದೇ ಉತ್ತರವಿಲ್ಲದ ಕಾರಣ, ಅವರು ನಮ್ಮನ್ನು ಹತ್ತಿಕ್ಕಲು ತಮ್ಮ ತಂತ್ರಗಳನ್ನು ಬಳಸುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ಹೇಳಿದರು.

“ಬುಧವಾರ ರಾತ್ರಿ ವಿಧಾನಸಭೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಶೌಚಾಲಯಕ್ಕೆ ಹೋಗದಂತೆ ತಡೆಯಲಾಗಿತ್ತು. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು” ಎಂದೂ ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...