ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎರಡು ಪ್ರಕರಣ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

Date:

  • ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ 2014ಕ್ಕಿಂತ ಹಳೆಯದು
  • ಮಹಿಳಾ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್

ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ (ಏಪ್ರಿಲ್‌ 28) ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್‌ ಭೂಷಣ್‌ ವಿರುದ್ಧ ಪೋಕ್ಸೊ ಕಾಯ್ದೆಯಡಿ ಒಂದು ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ಎರಡನೇ ಪ್ರಕರಣ ದಾಖಲಿಸಲಾಗಿದೆ.

ತಮಗೆ ಬ್ರಿಜ್ ಭೂಷಣ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ದೂರು ನೀಡಿದ್ದರು. ಆದರೆ, ದೆಹಲಿ ಪೊಲೀಸರು ಬ್ರಿಜ್‌ ಭೂಷಣ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿದ್ದರು. ಹೀಗಾಗಿ, ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಏಳು ಮಹಿಳಾ ಕ್ರೀಡಾಪಟುಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅರ್ಜಿಯ ವಿಚಾರಣೆಯನ್ನು ಸುಪ್ರೀಂನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಅವರ ಪೀಠ ನಡೆಸುತ್ತಿದೆ. ದೆಹಲಿ ಪೊಲೀಸರು ಪರವಾಗಿ ವಾದ ಮಂಡಿಸುತ್ತಿರುವ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, “ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗುವುದು” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಸುಪ್ರಿಂ ಕೋರ್ಟ್‌ನಲ್ಲಿ ಕುಸ್ತಿಪಟುಗಳ ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

“ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇರೆಗೆ ಎರಡು ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್‌ ದಾಖಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ 2014ಕ್ಕೂ ಹಿಂದಿನದು ಎಂದು ವರದಿಗಳು ಹೇಳಿವೆ. ಲಕ್ನೋದಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಮಹಿಳಾ ಕುಸ್ತಿ ಶಿಬಿರದಲ್ಲಿ ಭಾಗಿಯಾಗಿದ್ದ ಫಿಸಿಯೋಥೆರಪಿಸ್ಟ್ ಮತ್ತು ಮಹಿಳಾ ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸಿಂಗ್‌ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಸರ್ಕಾರಕ್ಕೆ ಎದುರಾದ ಸರಣಿ ರಾಜೀನಾಮೆಯ ರಾಜಕೀಯ ಬಿಕ್ಕಟ್ಟು

ಭಾರತದ ತಾರಾ ಕುಸ್ತಿಪಟುಗಳಾದ ವಿನೇಶ್ ಫೋಗಟ, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಅನೇಕರು ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಸಾಥ್‌ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...