ಮೋದಿ ಆಡಳಿತದಲ್ಲಿ ‘ಎರಡು ಭಾರತ’ಗಳಿವೆ: ರಾಹುಲ್‌ ಗಾಂಧಿ ವಾಗ್ದಾಳಿ

Date:

ಛತ್‌ ಪೂಜೆಗಾಗಿ ದೆಹಲಿ ಬಳಿಯ ಯಮುನಾ ನದಿ ಸಮೀಪ ಸ್ನಾನಕ್ಕಾಗಿ ಕೆಲವರಿಗೆ ಪ್ರತ್ಯೇಕ ಕೊಳವನ್ನು ನಿರ್ಮಿಸಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಆಡಳಿತದಲ್ಲಿ ‘ಎರಡು ಭಾರತ’ಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ರಾಹುಲ್‌ ಗಾಂಧಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಛತ್ ಪೂಜೆಯ ಸಮಯದಲ್ಲಿ, ಪ್ರಧಾನಿ ಮೋದಿ ಯಮುನಾ ನದಿಯಲ್ಲಿ ಸ್ನಾನ ಮಾಡಲು ನಿರ್ಧರಿಸಿದರು. ಅದಕ್ಕಾಗಿ ಪ್ರತ್ಯೇಕ ಕೊಳವನ್ನು ನಿರ್ಮಿಸಿದರು. ದೆಹಲಿಯ ಜನರಿಗೆ ಶುದ್ಧ ನೀರು ಸಿಗುವುದಿಲ್ಲ. ಆದರೆ, ಪ್ರಧಾನಿ ಮೋದಿ ಸ್ನಾನ ಮಾಡಲು ಯಮುನಾ ನದಿಗೆ ಪೈಪ್‌ಗಳ ಮೂಲಕ ಶುದ್ಧ ನೀರನ್ನು ತರಲಾಯಿತು” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಒಂದು ಕಡೆ, ಕಲುಷಿತಗೊಂಡ ಯಮುನಾ ನದಿ ಭಾರತ ಮತ್ತು ಬಿಹಾರದ ವಾಸ್ತವವನ್ನು ಹೊಂದಿತ್ತು. ಇದು ಒಂದು ಭಾರತ. ಮತ್ತೊಂದೆಡೆ, ಮೋದಿ ತಮಗಾಗಿ ಶುದ್ಧ ನೀರಿನ ಸಣ್ಣ ಕೊಳ ನಿರ್ಮಿಸಿಕೊಂಡಿದ್ದರು. ಅದನ್ನು ಪೈಪ್‌ಗಳ ಮೂಲಕ ಶುದ್ಧ ನೀರು ತಂದು ತುಂಬಿಸಲಾಗಿತ್ತು. ಇದು, ಮೋದಿ ಮತ್ತು ಅವರಂತಹ ಜನರು ಹಾಗೂ ಅದಾನಿ ಮತ್ತು ಅಂಬಾನಿಗೆ ಸೇರಿದ್ದು. ಇದು ಮತ್ತೊಂದು ಭಾರತ” ಎಂದು ಕಿಡಿಕಾರಿದ್ದಾರೆ.

chath yamuna

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್, “ಬಿಹಾರದಲ್ಲಿ ಕೈಗಾರಿಕೆಗಳಿಗೆ ಭೂಮಿ ಇಲ್ಲವೆಂದು ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಅದಾನಿಗೆ 1 ರೂ.ಗೆ ಭೂಮಿ ನೀಡಲಾಗಿದೆ. ಕೆಲವು ರೈತರಿಂದ ಭೂಮಿಯನ್ನು ಕಿತ್ತುಕೊಂಡು ಕೋಟ್ಯಾಧಿಪತಿಗಳಿಗೆ ಉಚಿತವಾಗಿ ನೀಡಿದೆ. ಲಕ್ಷಾಂತರ, ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ತೆಗೆದುಕೊಂಡು ಅದಾನಿಗೆ ಉಚಿತವಾಗಿ ಕೊಟ್ಟಿದೆ” ಎಂದು ದೂರಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

“2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ‘ಮತ ಕಳ್ಳತನ’ದ ಮೂಲಕ ಗೆದ್ದಿದೆ. ಎನ್‌ಡಿಎ ಮತ್ತು ಪ್ರಧಾನಿ ಮೋದಿ ಅವರು ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾಶಮಾಡುವ ಹಠಕ್ಕೆ ಬಿದ್ದಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ರೈತರು, ಕಾರ್ಮಿಕರು ಹಾಗೂ ದಲಿತರು ಸರ್ಕಾರವನ್ನು ರಚಿಸುತ್ತಾರೆ. ಎಲ್ಲ ಸಮುದಾಯಗಳ ಪ್ರಾತಿನಿಧ್ಯವನ್ನು ಹೊಂದಿರುತ್ತಾರೆ” ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...