ಪಶ್ಚಿಮ ಬಂಗಾಳ | SIR ಪ್ರಕ್ರಿಯೆಗಳ ಒತ್ತಡದಿಂದ ಇಬ್ಬರ ಸಾವು: ಕುಟುಂಬಸ್ಥರ ಆರೋಪ

Date:

ಪಶ್ಚಿಮ ಬಂಗಾಳದಲ್ಲಿ ಇಬ್ಬರು ಮೃತಪಟ್ಟಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಒತ್ತಡದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

ಕೂಚ್ ಬೆಹಾರ್‌ನ ಬೊರೊ ಹಲ್ದಿಬಾರಿಯ ಮಾಲಿನ್ ರಾಯ್ (55) ಪಾರ್ಶ್ವವಾಯುವಿಗೆ ತುತ್ತಾಗಿ ಜಲ್‌ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸೆಂಬರ್ 31ರಂದು ಎಸ್‌ಐಆರ್ ಪ್ರಕ್ರಿಯೆಯ ನಂತರ ಮಾಲಿನ್ ಹೆಸರು 2002ರ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದು ತಿಳಿದ ಬಳಿಕ ಮಾಲಿನ್ ಆತಂಕಕ್ಕೊಳಗಾಗಿದ್ದರು. ಇದರಿಂದಾಗಿ ಪಾರ್ಶ್ವವಾಯು ಆಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಎಸ್ಐಆರ್ ಒತ್ತಡ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬಿಎಲ್ಒ

ಇನ್ನು ಸಿಲಿಗುರಿ ಬಳಿಯ ಚುನಾಭಟ್ಟಿಯ 57 ವರ್ಷದ ಮೊಹಮ್ಮದ್ ಖಾದೆಮ್ ಫುಲ್ಬರಿಯಲ್ಲಿ ಪಾಳುಬಿದ್ದಿದ್ದ ಪೊಲೀಸ್ ಕ್ವಾರ್ಟರ್ಸ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಬಳಿಕ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಲಿಗುರಿ ಮೇಯರ್ ಗೌತಮ್ ದೇವ್ ಕುಟುಂಬವನ್ನು ಭೇಟಿ ಮಾಡಿದ್ದಾರೆ.

2025ರ ನವೆಂಬರ್‌ನಿಂದ ಡಿಸೆಂಬರ್‌ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸುಮಾರು 32 ರಿಂದ 40 ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಕೆಲಸದ ವಿಪರೀತ ಒತ್ತಡದಿಂದಾಗಿ ಕೆಲವರಿಗೆ ಹೃದಯಾಘಾತವಾಗಿದ್ದರೆ, ಇನ್ನು ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗುಜರಾತ್, ಕೇರಳ, ಮಧ್ಯಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗಿ ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಒತ್ತಡದ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಭಾರತೀಯ ಚುನಾವಣಾ ಆಯೋಗವು ಎಸ್‌ಐಆರ್ ಅವಧಿಯನ್ನು 2026ರ ಫೆಬ್ರವರಿ 14ರವರೆಗೆ ವಿಸ್ತರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...