ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ; ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ: ಡಿಸಿಎಂ ಡಿ.ಕೆ.ಶಿವಕುಮಾರ್

Date:

Advertisements

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಮನಗರದಲ್ಲಿ ಭಾನುವಾರ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಯುವ ಪರ್ವ’ ಸಮಾವೇಶದಲ್ಲಿ ಮಾತನಾಡಿದರು.

“ಕಾಂಗ್ರೆಸ್ ‌ಸರ್ಕಾರ ಅಧಿಕಾರಕ್ಕೆ ಬಂದ ನಂತರ‌ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯುವಕರಿಗೆ ಯುವನಿಧಿ ಮೂಲಕ ನೆರವಿಗೆ ನಿಂತಿದೆ. ಮಹಿಳೆಯರ ಪರವಾಗಿ ಐತಿಹಾಸಿಕ ಯೋಜನೆಗಳನ್ನು ತಂದು ಇತಿಹಾಸ ನಿರ್ಮಾಣ ಮಾಡಿರುವುದು ಕಾಂಗ್ರೆಸ್ ಪಕ್ಷ. ಉಚಿತ ಬಸ್, ಗೃಹಲಕ್ಷ್ಮೀ ಸೇರಿದಂತೆ ಅನೇಕ ಯೋಜನೆಗಳನ್ನು ದಳ, ಬಿಜೆಪಿಯವರು ನೀಡಿದ್ದಾರೆಯೇ” ಎಂದು ಪ್ರಶ್ನಿದರು.

Advertisements

ಯುವ ಕಾಂಗ್ರೆಸ್ ಪಕ್ಷ ನಾಯಕತ್ವ ಬೆಳೆಸುವ ಪ್ರಯೋಗ ಶಾಲೆ. ನೀವು ನಾಯಕರಾಗಿ ಬೆಳೆಯಬೇಕು ಎಂದರೆ ತಳಮಟ್ಟದಿಂದ ಕೆಲಸ ಮಾಡಬೇಕು. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಬೇಕು. ಯುವಕರಿಗೆ ನಿಮ್ಮ ಶಕ್ತಿಯ ಅರಿವಿಲ್ಲ‌. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು” ಎಂದರು.

” ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಲು ಮುಂದಾಗಿದ್ದೇವೆ. ಏಕೆಂದರೆ ಇಲ್ಲಿನ ಭೂಮಿ ಮೌಲ್ಯ ಹೆಚ್ಚಾಗಲಿದೆ, ಜನರ ಬದುಕು ಬದಲಾಗಲಿದೆ. ಇದು ನಮ್ಮ‌ ಜಿಲ್ಲೆ, ನಮ್ಮ ಸ್ವಾಭಿಮಾನ. ಬೆಂಗಳೂರಿಗೆ ನಾವು ಹೋಗುವುದು ತಪ್ಪಿ ನಮ್ಮನ್ನೇ ಬಳಸಿಕೊಳ್ಳುವ ಕಾಲ ಮುಂದಕ್ಕೆ ಬರಬೇಕು. ಸುರೇಶ್ ಅವರು ಸ್ಪರ್ಧಿಸುವ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಏಕೆ ಕರೆಯಲಾಗುತ್ತದೆ. ನಮ್ಮ ಹೆಸರನ್ನು ಬಿಟ್ಟು ಕೊಡುವುದಿಲ್ಲ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ಎಂದು ಮಾಡಲು ಹೊರಟಿದ್ದೇವೆ. ಇದನ್ನು ಕೈ ಬಿಡಿ ಎಂದು ದೇವೆಗೌಡರು, ಸಂಸದ ಮಂಜುನಾಥ್ ಅವರು ಪತ್ರ ಬರೆದಿದ್ದರು. ಈ ಹಿಂದೆ ಇದಕ್ಕೆ ಸಹಿ ಹಾಕಿದವರು ಕುಮಾರಸ್ವಾಮಿ‌. ಆದರೆ ಅವರಿಗೆ ಇದನ್ನು ಮುಂದುವರೆಸಲು ಆಗುವುದಿಲ್ಲ. ಈಗ ನಾನೇಕೆ ಅದನ್ನು ಡಿನೋಟಿಫಿಕೇಷನ್ ಮಾಡಲಿ. ಕೇಸನ್ನು ಹಾಕಿಸಿಕೊಳ್ಳಲು ನಾನು ತಯಾರಿಲ್ಲ. ರೈತರಿಗೆ ನಾಲ್ಕು ಪಟ್ಟು ಪರಿಹಾರ ದೊರೆಯುವಂತೆ ಮಾಡುತ್ತೇನೆ. ಯೋಗೇಶ್ವರ್, ಇಕ್ಬಾಲ್ ಅವರೆಲ್ಲಾ ಸೇರಿ ನಿಮ್ಮ ಬದುಕನ್ನು ಭದ್ರ ಮಾಡುತ್ತೇವೆ” ಎಂದರು.

“ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಏಕೆ ಒಂದೇ ಒಂದು ಜಿಲ್ಲಾಸ್ಪತ್ರೆ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ತನಕ ವಿಶ್ವವಿದ್ಯಾಲಯ ಕಟ್ಟಡವಿರಲಿಲ್ಲ” ಎಂದರು.

“ನಾವೊಬ್ಬರೇ ಕಚೇರಿ ಕಟ್ಟಬಹುದು.‌ ಆದರೆ ಎಲ್ಲರೂ ಕೈ ಜೋಡಿಸಬೇಕು. ಆಗ ಮಾತ್ರ ಇದು ನನ್ನದು, ನನ್ನ ಪಕ್ಷ‌ ಎನ್ನುವ ಅಭಿಮಾನವಿರುತ್ತದೆ. ದಾನಿಗಳ ಹೆಸರು ಶಾಶ್ವತವಾಗಿ ಉಳಿಯಬೇಕು ಎಂದು ದಾನಿಗಳ ಹೆಸರಿರುವ ಫಲಕಗಳನ್ನು ಅಳವಡಿಸಲಾಗುವುದು. ಒಂದು ವರ್ಷದೊಳಗೆ ಜಿಲ್ಲಾ ಕಾಂಗ್ರೆಸ್ ಕಟ್ಟಡ ನಿರ್ಮಾಣವಾಗುವಂತೆ ನೋಡಿಕೊಳ್ಳಲಾಗುವುದು. ಕಟ್ಟಡಕ್ಕೆ ದೇಣಿಗೆ ನೀಡುವವರು ಚೆಕ್ ಮುಖಾಂತರ ನೀಡಬೇಕು ಎಂದು ಮನವಿ. 5 ರಿಂದ 2 ಲಕ್ಷದ ಒಳಗೆ ಹಣ ನೀಡಿದರು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ರಾಮನಗರ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಿರುವ ಚಂದ್ರ ಸಾಗರ್ ಮತ್ತು ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X