ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

Date:

Advertisements

ಹಿಂದಿ ಹೇರಿಕೆ ವಿರುದ್ಧವಾಗಿ, ಮರಾಠಿ ಭಾಷೆ ಉಳಿವಿಗಾಗಿ ಜೊತೆಯಾದ ಠಾಕ್ರೆ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇದೀಗ ರಾಜಕೀಯ ಮೈತ್ರಿಗೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂಚಿತವಾಗಿ ಶಿವಸೇನೆ (ಯುಬಿಟಿ) ಮತ್ತು ಎಂಎನ್ಎಸ್ ನಡುವೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಸಾಮ್ನಾಗೆ ನೀಡಿದ ಸಂದರ್ಶನದ ವೇಳೆ ರಾಜಕೀಯ ಮೈತ್ರಿ ಕುರಿತು ರಾಜ್ ಜೊತೆ ಸಂಭಾವ್ಯ ಮಾತುಕತೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಪ್ರಶ್ನಿಸಿದಾಗ, “ಚರ್ಚೆಗಳು ನಡೆಯಲಿವೆ” ಎಂದು ಹೇಳಿದರು. ಠಾಕ್ರೆ ಸಹೋದರರಿಬ್ಬರು ಮರಾಠಿ ವಿಜಯೋತ್ಸವದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕೆಲವು ದಿನಗಳ ನಂತರ ಈ ಸಂದರ್ಶನ ನಡೆದಿದೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | 15 ದಿನದಲ್ಲೇ ಉದ್ಧವ್ ಠಾಕ್ರೆ ಮೋದಿ ಸರ್ಕಾರ ಸೇರ್ಪಡೆ: ಅಮರಾವತಿ ಶಾಸಕ

ಉದ್ಧವ್ ಠಾಕ್ರೆ ದಿವಂಗತ ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮಗನಾಗಿದ್ದು, ರಾಜ್ ಠಾಕ್ರೆ ಸೋದರಳಿಯ. 2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು.

2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು.

ಆದರೆ 2025ರ ಜುಲೈ 5ರಂದು, ಉದ್ಧವ್ ಮತ್ತು ರಾಜ್ ಸುಮಾರು 20 ವರ್ಷಗಳ ನಂತರ ಒಂದೇ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಾಗಿ ಸೇರಿದ್ದರು. ಜೊತೆಯಾಗಿ ಮರಾಠಿ ಮತ್ತು ಇಂಗ್ಲಿಷ್ ಶಾಲೆಗಳಲ್ಲಿ 1-5ನೇ ತರಗತಿಗಳಲ್ಲಿ ಹಿಂದಿಯನ್ನು ಪರಿಚಯಿಸುವ ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಇಬ್ಬರೂ ವಿರೋಧಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಆದೇಶವನ್ನು ಹಿಂಪಡೆದ ಬಳಿಕ ಠಾಕ್ರೆ ಸಹೋದರರು ವಿಜಯ ಮೆರವಣಿಗೆ ನಡೆದಿದ್ದಾರೆ. ಎರಡೂ ಕುಟುಂಬಗಳು ಈ ವೇಳೆ ಜೊತೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X