ರಾಮಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ಸಾಧ್ಯತೆ: ಉದ್ಧವ್ ಠಾಕ್ರೆ ಎಚ್ಚರಿಕೆ

Date:

Advertisements

ರಾಮ ಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಅಯೋಧ್ಯೆಗೆ ಬರಲಿರುವ ದೊಡ್ಡ ಸಂಖ್ಯೆಯ ಜನರು ವಾಪಸ್ ಹೋಗುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ’ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

“ರಾಮ ಮಂದಿರ ಉದ್ಘಾಟನೆಗೆ ಸರ್ಕಾರವು ಬಸ್ ಗಳು ಹಾಗೂ ಟ್ರಕ್ ಗಳಲ್ಲಿ ಅಸಂಖ್ಯಾತ ಜನರನ್ನು ಕರೆತರುವ ಸಾಧ್ಯತೆ ಇದೆ. ಅವರು ಮರಳುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ” ಎಂದು ಠಾಕ್ರೆ ಎಚ್ಚರಿಸಿದ್ದಾರೆ.

Advertisements

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸಿದ ಠಾಕ್ರೆ, ‘ಜನರು ತಮ್ಮ ಆದರ್ಶ ವ್ಯಕ್ತಿಗಳೆಂದು ಪರಿಗಣಿಸಬಹುದಾದ ಸೆಲೆಬ್ರಿಟಿಗಳನ್ನು ಬಿಜೆಪಿ ಹೊಂದಿಲ್ಲ. ಆದ್ದರಿಂದ ಅವರು ಸರ್ದಾರ್ ಪಟೇಲ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಂತಹ ದಿಗ್ಗಜರನ್ನು ತಮ್ಮ ಪಕ್ಷದವರನ್ನಾಗಿಸಿಕೊಂಡಿದ್ದಾರೆ. ಈಗ ನನ್ನ ತಂದೆ ಬಾಳಾ ಠಾಕ್ರೆಯ ಮೇಲೂ ಹಕ್ಕೂ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 27, 2002ರಂದು ಕರಸೇವಕರು ಅಯೋಧ್ಯೆಯಿಂದ ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದಾಗ ಗೋಧ್ರಾ ರೈಲು ನಿಲ್ದಾಣದಲ್ಲಿ ಕರಸೇವಕರು ಸಂಚರಿಸುತ್ತಿದ್ದ ರೈಲು ಬೋಗಿಗೆ ಬೆಂಕಿ ಹಚ್ಚಲಾಗಿದ್ದು, ಇದರಿಂದ ಹಲವು ಕರಸೇವಕರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುಜರಾತ್ ರಾಜ್ಯದಾದ್ಯಂತ ಹತ್ಯಾಕಾಂಡ ಆರಂಭವಾಗಿತ್ತು.

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಜನವರಿ 2024ರಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ಈ ನಡುವೆ, ಉದ್ಧವ್ ಠಾಕ್ರೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, “ವೋಟಿಗಾಗಿ ಪ್ರಧಾನಿ ಮೋದಿ ವಿರುದ್ಧ ರಚನೆಯಾಗಿರುವ ಮೈತ್ರಿಕೂಟವು ಯಾವ ಹಂತಕ್ಕಾದರೂ ಹೋಗಲಿದೆ ಎಂದಷ್ಟೆ ನಾನು ಹೇಳಬಲ್ಲೆ. ಅವರಿಗೆ ಕೊಂಚ ವಿವೇಕ ನೀಡು ಎಂದು ನಾನು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ. ಇದು ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X