ರಾಮಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ಸಾಧ್ಯತೆ: ಉದ್ಧವ್ ಠಾಕ್ರೆ ಎಚ್ಚರಿಕೆ

Date:

ರಾಮ ಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಅಯೋಧ್ಯೆಗೆ ಬರಲಿರುವ ದೊಡ್ಡ ಸಂಖ್ಯೆಯ ಜನರು ವಾಪಸ್ ಹೋಗುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ’ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

“ರಾಮ ಮಂದಿರ ಉದ್ಘಾಟನೆಗೆ ಸರ್ಕಾರವು ಬಸ್ ಗಳು ಹಾಗೂ ಟ್ರಕ್ ಗಳಲ್ಲಿ ಅಸಂಖ್ಯಾತ ಜನರನ್ನು ಕರೆತರುವ ಸಾಧ್ಯತೆ ಇದೆ. ಅವರು ಮರಳುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ” ಎಂದು ಠಾಕ್ರೆ ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸಿದ ಠಾಕ್ರೆ, ‘ಜನರು ತಮ್ಮ ಆದರ್ಶ ವ್ಯಕ್ತಿಗಳೆಂದು ಪರಿಗಣಿಸಬಹುದಾದ ಸೆಲೆಬ್ರಿಟಿಗಳನ್ನು ಬಿಜೆಪಿ ಹೊಂದಿಲ್ಲ. ಆದ್ದರಿಂದ ಅವರು ಸರ್ದಾರ್ ಪಟೇಲ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಂತಹ ದಿಗ್ಗಜರನ್ನು ತಮ್ಮ ಪಕ್ಷದವರನ್ನಾಗಿಸಿಕೊಂಡಿದ್ದಾರೆ. ಈಗ ನನ್ನ ತಂದೆ ಬಾಳಾ ಠಾಕ್ರೆಯ ಮೇಲೂ ಹಕ್ಕೂ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 27, 2002ರಂದು ಕರಸೇವಕರು ಅಯೋಧ್ಯೆಯಿಂದ ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದಾಗ ಗೋಧ್ರಾ ರೈಲು ನಿಲ್ದಾಣದಲ್ಲಿ ಕರಸೇವಕರು ಸಂಚರಿಸುತ್ತಿದ್ದ ರೈಲು ಬೋಗಿಗೆ ಬೆಂಕಿ ಹಚ್ಚಲಾಗಿದ್ದು, ಇದರಿಂದ ಹಲವು ಕರಸೇವಕರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುಜರಾತ್ ರಾಜ್ಯದಾದ್ಯಂತ ಹತ್ಯಾಕಾಂಡ ಆರಂಭವಾಗಿತ್ತು.

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಜನವರಿ 2024ರಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ಈ ನಡುವೆ, ಉದ್ಧವ್ ಠಾಕ್ರೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, “ವೋಟಿಗಾಗಿ ಪ್ರಧಾನಿ ಮೋದಿ ವಿರುದ್ಧ ರಚನೆಯಾಗಿರುವ ಮೈತ್ರಿಕೂಟವು ಯಾವ ಹಂತಕ್ಕಾದರೂ ಹೋಗಲಿದೆ ಎಂದಷ್ಟೆ ನಾನು ಹೇಳಬಲ್ಲೆ. ಅವರಿಗೆ ಕೊಂಚ ವಿವೇಕ ನೀಡು ಎಂದು ನಾನು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ. ಇದು ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...