ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

Date:

“ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧವಿದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಸರ್ಕಾರ ಒಪ್ಪದೆ ಈ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ” ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಕೆ‌ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ರಾಜ್ಯದಲ್ಲಿ 1300ಕ್ಕಿಂತ ಹೆಚ್ಚು ಜಾತಿಗಳು ಇರುವಾಗ 10 ಜಾತಿಗಳ ಹೆಸರುಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸರ್ಕಾರ ಈ ವರದಿ ಬಗ್ಗೆ ಅಧಿಕೃತವಾಗಿ ತೀರ್ಮಾನ ಮಾಡಿದ ಮೇಲೆ ಈ ವಿಚಾರದಲ್ಲಿ ಚರ್ಚೆ ಮಾಡಬೇಕಾಗುತ್ತದೆ. ಸರ್ಕಾರ ಬಿಡುಗಡೆ ಮಾಡದೆ ಯಾವುದನ್ನೂ ಅಧಿಕೃತ ದತ್ತಾಂಶವೆಂದು ಒಪ್ಪಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಿಲ್ಲಿಸಬೇಕು” ಎಂದು ಮನವಿ ಮಾಡಿದರು.

“ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯನಲ್ಲ. ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ. ಮುಂದಿನ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಸ್ನೇಹಿತರು ಆಪ್ತರ ಜೊತೆ ಮುಂದಿನ ರಾಜಕೀಯದ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ಬಿಜೆಪಿಯಿಂದ ಅಧಿಕೃತವಾಗಿ ಯಾರೂ ಸಂಪರ್ಕ ಮಾಡಿಲ್ಲ. ಬಿಜೆಪಿಯ ಕೆಲ ಸ್ನೇಹಿತರು ಕರೆ ಮಾಡಿ ಮಾತನಾಡುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕೊ ಬೇಡವೋ ಎಂದು ಮೊದಲು ಚರ್ಚೆ ಮಾಡುತ್ತೇನೆ. ಯಾವ ಪಕ್ಷದಿಂದ ಎಂಬುದು ಆಮೇಲೆ ಚರ್ಚೆಗೆ ಬರುತ್ತದೆ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬುದಾಗಿ ಒಂದು ವಾರದೊಳಗೆ ತೀರ್ಮಾನ ಮಾಡುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಹಾರಾಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....