ಉಡುಪಿಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್

Date:

ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿ ನಗರಕ್ಕೆ ಭೇಟಿ ನೀಡಿದ್ದಾರೆ.

- Advertisement -

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೆಡಿಕಲ್ ಸ್ಪೂಡೆಂಟ್ಸ್ ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಅರಿತುಕೊಳ್ಳಬೇಕಾಗಿದೆ. ಒಟ್ಟು ಎರಡು ದಿನ ನಾನು ಉಡುಪಿಯಲ್ಲಿ ಇರುತ್ತೇನೆ. ಕಾಲೇಜಿಗೆ ಭೇಟಿ ಕೊಡುತ್ತೇನೆ” ಎಂದು ತಿಳಿಸಿದರು.

ಬಳಿಕ ಉಡುಪಿ ಪ್ರವಾನಿ ಮಂದಿರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಜೊತೆ ಖುಷ್ಬೂ ಸುಂದರ್ ಮಹತ್ವದ ಸಭೆ ನಡೆಸಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ ಕೂಡ ಹಾಜರಿದ್ದಾರೆ.

ಕಾಲೇಜಿನಲ್ಲಿ ನಡೆದ ಅನುಚಿತ ಘಟನೆಯ ಮಹಿಳಾ ಆಯೋಗದ ಪರವಾಗಿ ಖುಷ್ಬೂ ಮಾಹಿತಿ ಪಡೆದಿದ್ದಾರೆ. ಪೊಲೀಸರು ದಾಖಲಿಸಿಕೊಂಡಿರುವ ಎಫ್ಐಆರ್​​ನ ವಿವರವನ್ನೂ ಪಡೆದಿದ್ದಾರೆ.

ಉಡುಪಿಗೆ ತೆರಳಿರುವ ಬಗ್ಗೆ ಟ್ವೀಟ್ ಮಾಡಿರುವ ಖುಷ್ಬೂ ಸುಂದರ್, “ಉಡುಪಿಯಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರನ್ನು ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ಪಡೆಯಲಾಗಿದೆ. ವಿಭಿನ್ನ ಕಥೆಗಳು, ವಿಭಿನ್ನ ಸಿದ್ಧಾಂತಗಳು, ವಿಭಿನ್ನ ತೀರ್ಮಾನಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡುತ್ತಿವೆ. ನಕಲಿ ವಾಟ್ಸ್​ಆ್ಯಪ್ ಫಾರ್ವರ್ಡ್‌ಗಳು ನಿಲ್ಲಬೇಕು. ನಾನು ದೆಹಲಿಯಿಂದ ಉಡುಪಿಗೆ ತೆರಳಿದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಥವರ ಡಿಎನ್​ಎಯಲ್ಲಿ ಹತಾಶೆ ಕಾಣಿಸುತ್ತಿದೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ಅಪಾಯಕಾರಿ ಬೆಳವಣಿಗೆ: ಸಿ ಟಿ ರವಿ

ಉಡುಪಿ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ; ಸಿದ್ದರಾಮಯ್ಯ

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಕ್ರಮಕೈಗೊಂಡಿದೆ ಎಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಜಿಲ್ಲಾ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ರಾಜಕೀಯ ಕಾರಣಕ್ಕಾಗಿ ಕೆಲವರು ಏನೇನೋ ಹೇಳುತ್ತಾರೆ. ಮಹಿಳಾ ಆಯೋಗದವರು ಭೇಟಿ ನೀಡಿದ್ದಾರೆ. ಅವರು ಏನು ಹೇಳುತ್ತಾರೆ ನೋಡೋಣ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...