ಉಡುಪಿ | ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್-ಆಪ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

Date:

  • ಅನುಮತಿ ಪಡೆಯದೇ ಬ್ಯಾನರ್‌ ಅಳವಡಿಕೆ
  • ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್‌ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ ವಿರುದ್ಧ ದೂರು ದಾಖಲಾಗಿದೆ.

- Advertisement -

ಅನುಮತಿ ಪಡೆಯದೇ ಉಡುಪಿ ಜಿಲ್ಲೆ ಬ್ರಹ್ಮಗಿರಿ ಸಮೀಪದ ನಾಯರ್‌ಕೆರೆ ಬಳಿ ಇರುವ ಕಾಂಗ್ರೆಸ್‌ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಭಾವಚಿತ್ರವಿರುವ ಬ್ಯಾನರ್‌ ಹಾಗೂ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ಗಳ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮತ್ತೊಂದು ಕಡೆ ಕಲ್ಸಂಕ ಜಂಕ್ಷನ್ ಬಳಿ ಇರುವ ಆಮ್‌ ಆದ್ಮಿ ಕಚೇರಿಯಲ್ಲಿ ಪೂರ್ವಾನುಮತಿ ಪಡೆಯದೆ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಕೇಜ್ರಿವಾಲ್ ಅವರ ಭಾವಚಿತ್ರ ಮತ್ತು ಪಕ್ಷದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? : ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಎರಡು ಕಡೆ ಇದ್ದ ಫ್ಲೆಕ್ಸ್ ಗಳನ್ನು ಅಳವಡಿಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಇದರ ಬಗ್ಗೆ ಗಮನ ಹರಿಸಿದ ಫ್ಲೈಯಿಂಗ್‌ ಸ್ಕ್ವಾಡ್ ತಂಡದ ಅಧಿಕಾರಿ ರೋಶನ್‌ ಕುಮಾರ್‌ ಚುನಾವಣಾಧಿಕಾರಿಗೆ ದೂರು ನೀಡಿದರು.

ಪ್ರಕರಣ ದಾಖಲಿಸಿಕೊಂಡ ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು ಕಾಂಗ್ರೆಸ್ ಕಚೇರಿಗೆ ಹಾಗೂ ಆಪ್‌ ಕಚೇರಿಗೆ ಭೇಟಿ ನೀಡಿ ಫ್ಲೆಕ್ಸ್ ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...