ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC-NET) ಪರೀಕ್ಷೆಯನ್ನು ನಡೆಸಿದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಲು ನಿರ್ಧರಿಸಿದೆ.
ಮಂಗಳವಾರ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಉನ್ನತ ಶಿಕ್ಷಣ ಸಚಿವಾಲಯವು ಬುಧವಾರ ರಾತ್ರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
Government is committed to ensure the sanctity of examinations and protect the interest of students.
Ministry of Education has decided that the UGC-NET June 2024 Examination be cancelled on the basis of inputs from Indian Cyber Crime Coordination Centre (I4C) under the Ministry…
— Ministry of Education (@EduMinOfIndia) June 19, 2024
ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ದೂರು ಬಂದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
“ಪರೀಕ್ಷೆಯನ್ನು ಹೊಸದಾಗಿ ನಡೆಸಲಾಗುವುದು. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುತ್ತದೆ. ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ” ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.
ಇದನ್ನು ಓದಿದ್ದೀರಾ? ತವರು ಕ್ಷೇತ್ರ ವಾರಣಾಸಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾರಿಗೆ ಚಪ್ಪಲಿ ಎಸೆತ: ವಿಡಿಯೋ ವೈರಲ್
ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು/ಅಥವಾ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಹುದ್ದೆಗೆ ಅರ್ಹತೆಯನ್ನು ನಿರ್ಧರಿಸಲು UGC-NET ಅನ್ನು ನಡೆಸಲಾಗುತ್ತದೆ.
