UGC-NET ಪರೀಕ್ಷೆ ನಡೆದ ಮರುದಿನವೇ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ!

Date:

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC-NET) ಪರೀಕ್ಷೆಯನ್ನು ನಡೆಸಿದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಲು ನಿರ್ಧರಿಸಿದೆ.

- Advertisement -

ಮಂಗಳವಾರ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಉನ್ನತ ಶಿಕ್ಷಣ ಸಚಿವಾಲಯವು ಬುಧವಾರ ರಾತ್ರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ದೂರು ಬಂದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

“ಪರೀಕ್ಷೆಯನ್ನು ಹೊಸದಾಗಿ ನಡೆಸಲಾಗುವುದು. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುತ್ತದೆ. ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ” ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿದ್ದೀರಾ? ತವರು ಕ್ಷೇತ್ರ ವಾರಣಾಸಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾರಿಗೆ ಚಪ್ಪಲಿ ಎಸೆತ: ವಿಡಿಯೋ ವೈರಲ್

ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು/ಅಥವಾ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಹುದ್ದೆಗೆ ಅರ್ಹತೆಯನ್ನು ನಿರ್ಧರಿಸಲು UGC-NET ಅನ್ನು ನಡೆಸಲಾಗುತ್ತದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

 ಡೀಸೆಲ್, ಎಟಿಎಫ್ ರಫ್ತಿನ ಮೇಲಿನ ತೆರಿಗೆ ಹೆಚ್ಚಿಸಿದ ಸರ್ಕಾರ!

ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತಿನ ಮೇಲಿನ 'ವಿಂಡ್‌ಫಾಲ್ ಗೇನ್ಸ್...

‘ಕಾಸ್ಟಿಂಗ್ ಕೌಚ್’ಗೆ ಲಿಂಗಭೇದವಿಲ್ಲ, ಚಿತ್ರರಂಗಕ್ಕೆ ಮಾತ್ರವೇ ಸೀಮಿತವೂ ಅಲ್ಲ: ನಟಿ ರಮ್ಯಾ ಕೃಷ್ಣನ್ ಸ್ಫೋಟಕ ಹೇಳಿಕೆ

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹೆಗ್ಗಿಲ್ಲದೆ ನಡೆಯುತ್ತದೆ. ಇಂತಹ ಶೋಷಣೆಗೆ ಯಾವುದೇ ಲಿಂಗಭೇದವಿಲ್ಲ....

ದೇಶದಲ್ಲಿ 1,765 ಆನೆಗಳ ಅಸಹಜ ಸಾವು, ಕರ್ನಾಟಕಕ್ಕೆ ಮೂರನೇ ಸ್ಥಾನ!

ಕಳೆದ 17 ವರ್ಷಗಳ ಅವಧಿಯಲ್ಲಿ (2009 ರಿಂದ 2026ರವರೆಗೆ) ಭಾರತದಾದ್ಯಂತ ಒಟ್ಟು...

ನಿರ್ದಿಷ್ಟ ಕ್ಷೇತ್ರಕ್ಕೆ ಮೀಸಲಾತಿ ಕೇಳುವ ಹಕ್ಕು ಯಾರಿಗೂ ಇಲ್ಲ; ಸರದಿ ಬದಲಾವಣೆ ಸರ್ಕಾರದ ಪರಮಾಧಿಕಾರ: ಸುಪ್ರೀಂ ಕೋರ್ಟ್

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ನಿರ್ದಿಷ್ಟ ಕ್ಷೇತ್ರವನ್ನು ಪರಿಶಿಷ್ಟ ಜಾತಿ (SC)...