ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗದು: ಹಿಂದಿ ಹೇರಿಕೆ ವಿರುದ್ಧ ಸುಪ್ರಿಯಾ ಸುಳೆ ಆಕ್ರೋಶ

Date:

ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನ್ನು ಬಲವಂತವಾಗಿ ಅನುಷ್ಠಾನ ಮಾಡಿ ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಶನಿವಾರ ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ಮರಾಠಿ ಮತ್ತು ಇಂಗ್ಲಿಷ್-ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯನ್ನಾಗಿ ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಾರಾಮತಿ ಸಂಸದೆ ಸುಪ್ರಿಯಾ, “ಮಹಾರಾಷ್ಟ್ರದಲ್ಲಿ ಸಿಬಿಎಸ್‌ಇ ಮಂಡಳಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಶಿಕ್ಷಣ ಸಚಿವರ ಹೇಳಿಕೆಯನ್ನು ನಾನು ಮೊದಲು ವಿರೋಧಿಸುತ್ತೇನೆ. ಅಸ್ತಿತ್ವದಲ್ಲಿರುವ ರಾಜ್ಯ ಮಂಡಳಿಯನ್ನು ಸಿಬಿಎಸ್‌ಇಗೆ ಬದಲಾಯಿಸುವ ಅಗತ್ಯವೇನು” ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ, “ಭಾಷಾ ಸಮಸ್ಯೆಯನ್ನು ಚರ್ಚಿಸುವ ಮೊದಲು, ನಾವು ರಾಜ್ಯದ ಮೂಲಭೂತ ಶಿಕ್ಷಣ ಮೂಲಸೌಕರ್ಯದ ಬಗ್ಗೆ ಮಾತನಾಡಬೇಕು” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಪ್ರಥಮ್ ಫೌಂಡೇಶನ್ ಎಂಬ ಸರ್ಕಾರೇತರ ಸಂಸ್ಥೆ ಬಿಡುಗಡೆ ಮಾಡಿದ ವಾರ್ಷಿಕ ಶಿಕ್ಷಣ ಸ್ಥಿತಿ ವರದಿ (ASER)ಯನ್ನೂ ಸಂಸದೆ ಉಲ್ಲೇಖಿಸಿದ್ದಾರೆ. ಗಣಿತ, ವಿಜ್ಞಾನ ಮತ್ತು ಭಾಷೆಗಳನ್ನು ಅಧ್ಯಯನ ಮಾಡುವ ವಿಚಾರದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆ ಹೇಗಿದೆ ಎಂಬುದನ್ನು ಮೌಲ್ಯಮಾಪನ ಮಾಡುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಈ ವೇಳೆಯೇ, “ಸರ್ಕಾರ ಎನ್‌ಇಪಿ ಅನ್ನು ಜಾರಿಗೆ ತರಲು ಆತುರಪಡಬಾರದು. ಎನ್‌ಇಪಿ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಶಿಕ್ಷಕರೂ ಈ ಬದಲಾವಣೆಗೆ ಸಿದ್ಧರಾಗಿಲ್ಲ” ಎಂದು ವಿವರಿಸಿದರು.

“ಮಹಾರಾಷ್ಟ್ರದಲ್ಲಿ ಎನ್‌ಇಪಿ ಜಾರಿಯಿಂದಾಗಿ ಮರಾಠಿ ಭಾಷೆಗೆ ಯಾವುದೇ ನಷ್ಟ ಉಂಟಾದರೂ ಅದನ್ನು ಸಹಿಸಲಾಗುವುದಿಲ್ಲ. ಮರಾಠಿ ಆದ್ಯತೆಯಾಗಿರಬೇಕು. ಇತರ ಭಾಷೆಗಳನ್ನು ಪರಿಚಯಿಸುವುದಾದರೆ, ಯಾವ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಪೋಷಕರಿಗೆ ಬಿಡಬೇಕು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಿಂದಿ ಭಾಷಾ ಹೇರಿಕೆ ವಿವಾದದ ನಡುವೆ ಡೈರಿ ಮಿಲ್ಕ್ ಹೊಸ ಜಾಹೀರಾತು ವೈರಲ್

“ಯಾವುದೇ ಭಾಷೆಯನ್ನೂ ಕಡ್ಡಾಯಗೊಳಿಸುವುದು ಸರಿಯಲ್ಲ. ಮರಾಠಿ ರಾಜ್ಯದ ನಿವಾಸಿಗಳ ಮಾತೃಭಾಷೆ. ಮರಾಠಿ ಎಂದಿಗೂ ಮೊದಲ ಭಾಷೆಯಾಗಿಯೇ ಉಳಿಯಬೇಕು” ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಇದರ ಮೂಲಕ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಆರೋಪವಾಗಿದೆ. ಕೇಂದ್ರ ಸರ್ಕಾರವು ಇತರೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಕನ್ನಡ, ತಮಿಳು, ತೆಲುಗು, ಮರಾಠಿ ಭಾಷಿಕರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...