ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗಳಿಗೆ ಸಿದ್ದರಾಮಯ್ಯ ಪತ್ರ

Date:

Advertisements

ಕೇಂದ್ರ ಸರ್ಕಾರವು ತೆರಿಗೆ ತಾರತಮ್ಯ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಸಿಎಂ ಪತ್ರ ಬರೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಹೈಕಮಾಂಡ್ ಬಯಸುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ, ಇದು ಬೀದಿ ಚರ್ಚೆಯಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

“ಕರ್ನಾಟಕ ಮತ್ತು ಇತರ ತಲಾವಾರು ಜಿಎಸ್‌ಡಿಪಿ ಅಧಿಕವಾಗಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ. ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಈ ರಾಜ್ಯಗಳು ಪಡೆಯುತ್ತಿವೆ. ಈ ಅನ್ಯಾಯದ ವಿಧಾನವು ಸಹಕಾರಿ ಫೆಡರಲಿಸಂನ ಮನೋಭಾವವನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಗತಿಪರ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತದೆ” ಎಂದು ಸಿಎಂ ಅಭಿಪ್ರಾಯಿಸಿದ್ದಾರೆ.

“ಹಣಕಾಸು ಆಯೋಗವು ಬೆಳವಣಿಗೆ ಮತ್ತು ಉತ್ತಮ ತೆರಿಗೆ ಕ್ರೋಢೀಕರಣಕ್ಕಾಗಿ ಉತ್ತೇಜನೆ ಮಾಡುವ ಅಗತ್ಯವಿರುವ ನಿಟ್ಟಿನಲ್ಲಿ ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X