ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿದೆ: ಸಚಿವ ಕೆ ಜೆ ಜಾರ್ಜ್‌

Date:

ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ‌ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ತಿಳಿಸಿದ್ದಾರೆ.

ಇಂಧನ ಇಲಾಖೆ ಕೈಗೊಂಡಿದ್ದ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ವಿದ್ಯುತ್ ಖರೀದಿಯಿಂದ ಹೆಚ್ಚು ಹೊರೆಯಾಗದಂತೆ ನೋಡಿಕೊಳ್ಳಲು ಅನ್ಯ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗಿತ್ತು. ಅಲ್ಲದೇ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆ, ವಿದ್ಯುತ್‌ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ ರಾಜ್ಯದಲ್ಲಿರುವ ಖಾಸಗಿ ವಿದ್ಯುತ್ ಉತ್ಪಾದಕರು ರಾಜ್ಯ ಗ್ರಿಡ್‌ಗೆ ವಿದ್ಯುತ್ ನೀಡುವಂತೆ ನೋಡಿಕೊಳ್ಳುವ ಮೂಲಕ ಬೇಸಿಗೆಯ ವಿದ್ಯುತ್ ಬೇಡಿಕೆಯನ್ನು ಪೂರೈಸಲಾಗಿದೆ” ಎಂದು ಹೇಳಿದ್ದಾರೆ.

“ಈ ಬಾರಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಒದಗಿಸುವುದು ನಮ್ಮ ಜವಾಬ್ದಾರಿ. ಅದರಂತೆ ಹೊರ ರಾಜ್ಯಗಳೊಂದಿಗೆ ವಿನಿಮಯ ಒಪ್ಪಂದ ಮಾಡಿಕೊಂಡೆವು, ಮಾರುಕಟ್ಟೆಯಿಂದ ಖರೀದಿಸಿದೆವು. ಒಟ್ಟಾರೆಯಾಗಿ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲದಂತೆ, ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂಬ ಸಾರ್ಥಕ ಭಾವ ಇದೆ. ಖರೀದಿ ಹೊರತಾಗಿ ರಾಜ್ಯದ 3 ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22,000 ಮಿ.ಯೂ. ವಿದ್ಯುತ್ ಉತ್ಪಾದನೆಯಾಗಿದೆ”ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದಿನವೊಂದಕ್ಕೆ ದಾಖಲೆಯ ವಿದ್ಯುತ್ ಬೇಡಿಕೆ ಮತ್ತು ಪೂರೈಕೆಗೂ ಈ ಬೇಸಿಗೆ ಸಾಕ್ಷಿಯಾಗಿತ್ತು. 2024 ಮಾರ್ಚ್‌ 12ರಂದು ಅತಿ ಹೆಚ್ಚಿನ ಬೇಡಿಕೆ ಅಂದರೆ 17220 ಮೆ.ವ್ಯಾ. ಇತ್ತು. ಅದರಂತೆ ವಿದ್ಯುತ್ ಪೂರೈಸಲಾಗಿತ್ತು. ಅದೇ ರೀತಿ 2024ರ ಏಪ್ರಿಲ್‌ 5ರಂದು ಅತಿ ಹೆಚ್ಚು ಅಂದರೆ 332 ಮೆ.ಯೂ. ವಿದ್ಯುತ್‌ ಬಳಕೆಯಾದ ದಿನವಾಗಿತ್ತು. ಇದು ಇಂಧನ ಇಲಾಖೆಯಲ್ಲಿ ದಾಖಲೆಯ ವಿದ್ಯುತ್ ಪೂರೈಕೆಯಾಗಿದೆ” ಎಂದು ತಿಳಿಸಿದ್ದಾರೆ.

ವಿದ್ಯುತ್ ವಿನಿಮಯಕ್ಕೆ ಒತ್ತು

“ಇಂಧನ ಇಲಾಖೆ ವಿದ್ಯುತ್ ಖರೀದಿ ಬದಲಾಗಿ ವಿನಿಯಮ ಮಾಡಿಕೊಂಡು ಬೊಕ್ಕಸಕ್ಕೆ ಹೆಚ್ಚು ಹೊರೆಯಾಗದಂತೆ ನೋಡಿಕೊಳ್ಳಲು ಮುಂದಾಗಿ ಹೊರ ರಾಜ್ಯಗಳಿಂದ ವಿದ್ಯುತ್ ಪಡೆದು ಅದನ್ನು ಮುಳೆಗಾಲದಲ್ಲಿ ವಾಪಸ್ ಮಾಡಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಪಂಜಾಬ್‌ ಮತ್ತು ಉತ್ತರ ಪ್ರದೇಶದೊಂದಿಗೆ 2023 ನವೆಂಬರ್‌ನಿಂದ 2024 ಮೇವರೆಗೂ ವಿದ್ಯುತ್‌ ವಿನಿಮಯದ ಒಪ್ಪಂದ ಮಾಡಿಕೊಂಡು ಗ್ರಾಹಕರಿಗೆ ವಿದ್ಯುತ್ ಪೂರೈಸಲಾಗಿದೆ. ಇದೇ ಜೂನ್ 16ರಿಂದ ಈ ಎರಡೂ ರಾಜ್ಯಗಳಿಗೆ ವಿದ್ಯುತ್ ಹಿಂತಿರುಗಿಸಲಾಗುತ್ತದೆ. ಇದರಿಂದಾಗಿ ವಿದ್ಯುತ್ ಖರೀದಿಯ ಅಗತ್ಯ ಕಡಿಮೆಯಾಗಿತ್ತು” ಎಂದು ವಿವರಿಸಿದ್ದಾರೆ.

ಗರಿಷ್ಠ ವಿದ್ಯುತ್ ಉತ್ಪಾದನೆ

“ಈ ಬಾರಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು, ಇದು ದಾಖಲೆಯಾಗಿದೆ” ಎಂದಿದ್ದಾರೆ.

ಕಲ್ಲಿದ್ದಲು ಕೊರತೆ ಇಲ್ಲ

“ಉಷ್ಣ ವಿದ್ಯುತ್ ಸ್ಥಾವರಗಳು ನಿರೀಕ್ಷೆ ಮೀರಿ ವಿದ್ಯುತ್ ಉತ್ಪಾದಿಸಲು ಮುಖ್ಯ ಕಾರಣ ಕಲ್ಲಿದ್ದಲು ಸಮಸ್ಯೆ ದುರಾಗದಂತೆ ನೋಡಿಕೊಂಡಿದ್ದು. ಕೇಂದ್ರ ಸರಕಾರದ ಜತೆ ಸಮನ್ವಯ ಸಾಧಿಸಿ ಅಗತ್ಯ ಕಲ್ಲಿದಲ್ಲು ಸಂಗ್ರಹವಾಗುವಂತೆ ನೋಡಿಕೊಳ್ಳುವುದರೊಂದಿಗೆ, ವಿದೇಶಿ ಕಲ್ಲಿದ್ದಲು ಮಿಶ್ರಣ ಮ ಡಿ ಹೆಚ್ಚಿನ ಉತ್ಪಾದನೆಗೆ ಗಮನಹರಿಸಲಾಗಿತ್ತು” ಎಂದು ಹೇಳಿದ್ದಾರೆ.

ಜಲ ವಿದ್ಯುತ್ ಉತ್ಪಾದನೆಯಲ್ಲಿ ಸಮನ್ವಯತೆ

“ಮಳೆ ಕೊರತೆ ಇದ್ದುದರಿಂದ ಜಲ ವಿದ್ಯುತ್ ಉತ್ಪಾದನೆ ಕುರಿತು ಎಚ್ಚರಿಕೆಯಿಂದ ನಿರ್ಧರಿಸಲಾಗುತ್ತಿತ್ತು. ಜಲ ವಿದ್ಯುತ್ ಉತ್ಪಾದನಾ ಘಟಕಗಳಿಂದ 2023-24ನೇ ಸಾಲಿನಲ್ಲಿ ಒಟ್ಟಾರೆ 8,860 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದರೆ, 2024ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 1,119 ಮಿಲಿಯನ್ ಯೂನಿಟ್ ಉತ್ಪಾದನೆ ಮಾಡಲಾಗಿದೆ. ಇದರ ಜತೆಗೆ ಮಳೆ ಬಾರದಿದ್ದರೂ ಜೂನ್ ಅಂತ್ಯದವರೆಗೆ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗದಂತೆ ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ಅದರಲ್ಲೂ ಪ್ರಮುಖ ಜಲಾಶಯಗಳಾದ ಸೂಪಾ (ಶೇ. 23.2), ಲಿಂಗನಮಕ್ಕಿ (ಶೇ. 9.4), ಮಾಣಿ (ಶೇ. 11.7) ನೀರು ಸಂಗ್ರಹವಿದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್

ವರ್ಗಾವಣೆ ಕೌನ್ಸಲಿಂಗ್ ಸುತ್ತೋಲೆ ಪ್ರಕಟ ಜುಲೈ ತಿಂಗಳ ಅಂತ್ಯದೊಳಗೆ ಕೌನ್ಸಲಿಂಗ್...

ಇಂಧನ ದರ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟ; ಖಾಸಗಿ ಸಾರಿಗೆ ಸಂಘಟನೆಗಳ ಎಚ್ಚರಿಕೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ...

ಬೆಂಗಳೂರು | 15 ದಿನದ ಮಗುವಿಗೆ ‘ಹಾರ್ಟ್ ಆಪರೇಷನ್’ ಮಾಡಿ ಯಶಸ್ವಿಯಾದ ಸರ್ಕಾರಿ ಆಸ್ಪತ್ರೆ ವೈದ್ಯರು

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ...