ಕೇಂದ್ರ ಬಜೆಟ್‌ 2024 | ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ ಟೀಕೆ

Date:

Advertisements

“ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ, ಅನ್ಯಾಯ ಎಸಗಿದ್ದಾರೆ. ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು ಎರಡನ್ನೂ ಈಡೇರಿಸಿಲ್ಲ” ಎಂದರು.

“ಕಲ್ಯಾಣ ಕರ್ನಾಟಕಕ್ಕೆ ನಾವು 5,000 ಕೋಟಿ ರೂ. ಕೊಟ್ಟಿದ್ದೇವೆ. ಅದಕ್ಕೆ ಹೊಂದಾಣಿಕೆ ಅನುದಾನ ಕೇಳಿದ್ದೆವು. ಅದನ್ನೂ ಕೊಡಲಿಲ್ಲ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಎಂಎಸ್‌ಪಿಗೆ ಕಾಯ್ದೆ ಮಾಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದರು. ಈ ಬಗ್ಗೆ ಬಜೆಟ್‌ನಲ್ಲಿ ಚಕಾರವನ್ನೇ ಎತ್ತಿಲ್ಲ” ಎಂದು ಹೇಳಿದರು.

Advertisements

“ಶಿಕ್ಷಣಕ್ಕೆ ಫೆಬ್ರವರಿ ಬಜೆಟ್‌ನಲ್ಲಿ 1.21 ಲಕ್ಷ ಕೋಟಿ ಕೊಟ್ಟು ಈಗ ಇದನ್ನು 1.25 ಮಾಡಿದ್ದಾರೆ ಅಷ್ಟೇ. ಐಟಿ ಮತ್ತು ಸಂವಹನ ಕ್ಷೇತ್ರಕ್ಕೆ ಫೆಬ್ರವರಿಯಲ್ಲಿ 1.37 ಲಕ್ಷ ಕೋಟಿ ಇತ್ತು. ಈಗ ಇದನ್ನು 1.16 ಲಕ್ಷ ಕೋಟಿಗೆ ಇಳಿಸಿದ್ದಾರೆ. ಐದು ಜನ‌ ಕೇಂದ್ರ ಸಚಿವರು ರಾಜ್ಯದವರು. ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಟೀಕಿಸಿದರು.

“ಫೆರಿಫೆರಲ್ ರಿಂಗ್ ರಸ್ತೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತರಾಮನ್ ಅವರು ತಾವೇ ಈ ಹಿಂದೆ ಘೋಷಿಸಿದ್ದ ಅನುದಾನವನ್ನೂ ನೀಡಿಲ್ಲ. ಎಸ್‌ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹ” ಎಂದರು.

“ಮೋದಿ ಸರ್ಕಾರ ಮತ್ತು ಈ ಸರ್ಕಾರದ ಬಜೆಟ್ ಮೇಲೆ ಯಾವ ಭರವಸೆಗಳೂ ಇಲ್ಲ. ಹಿಂದನ ಬಜೆಟ್‌ನಲ್ಲಿ ಅವರೇ ಘೋಷಿಸಿದ್ದನ್ನೇ ಇವತ್ತಿನವರೆಗೂ ಜಾರಿ ಮಾಡಿಯೇ ಇಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ” ಎಂದು ಹೇಳಿದರು.

“ಬಜೆಟ್ ಪೂರ್ವ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನಮಗೂ ಆಹ್ವಾನಿಸಿದ್ದರು. ಈಗ ನೋಡಿದ್ರೆ ಯಾವ ಸಾರ್ಥಕತೆಗೆ ಕರೆದದ್ದು ಅನ್ನಿಸುತ್ತಿದೆ. ದಕ್ಷಿಣ ಭಾರತದಲ್ಲಿ ಆಂಧ್ರ ಹೊರತುಪಡಿಸಿ ಉಳಿದ ಯಾವ ರಾಜ್ಯಗಳಿಗೂ ಏನೂ ಸಿಕ್ಕಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. If Smt. Nirmala Sitharaman is not considering Karnataka for any thing, then why is she being elected from Karnataka? The responsible people should be taken to task or else they or she should vacate the sheet. this is my opinion

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X