ಕೇಂದ್ರ ಬಜೆಟ್ 2025 | ಜನರಿಗೆ ಅನುಕೂಲವಾಗುವುದು ಏನೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

“ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂಥದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್ಎಂಇ, ಎಂಎಸ್ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ” ಎಂದು ಗ್ರಾಮೀಣಾಭಿವೃದ್ಧಿ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಅವರು, “ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್‌ಟಿ ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ಧತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? ಸ್ಟಾರ್ಟ್ಅಪ್ ಇಂಡಿಯಾ ಯೋಜನೆಯಲ್ಲಿ 9 ವರ್ಷದ ಹಿಂದೆ ₹20 ಸಾವಿರ ಘೋಷಣೆ ಮಾಡಿ ಈವರೆಗೂ ಕೊಟ್ಟಿದ್ದು ₹454 ಕೋಟಿ ರೂ ಅಷ್ಟೆ. ಅವರು ಅಲಂಕಾರಿಕ ಪದಗಳನ್ನು ಬಳಸಿ ಘೋಷಣೆಗಳನ್ನು ಮಾಡುವುದರಲ್ಲಿ ಮುಂದಿದ್ದಾರೆ. ಆದರೆ ಬೇರು ಮಟ್ಟದಲ್ಲಿ ಅನುಷ್ಠಾನ ಶೂನ್ಯ” ಎಂದು ಖರ್ಗೆ ತಿಳಿಸಿದರು.

ಇದನ್ನು ಓದಿದ್ದೀರಾ? ಗುಜರಾತ್ ಗಲಭೆ | ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದರ ಪತ್ನಿ ಝಕಿಯಾ ಜಾಫ್ರಿ ನಿಧನ

“ಕೇಂದ್ರ ಸರ್ಕಾರದವರ ಬಳಿ ದುಡ್ಡಿಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್‌ನಲ್ಲಿ ₹3500 ಕೋಟಿ ಕೊಡಬೇಕು. ಆದರೆ ನೀಡಿರುವುದು ₹500 ಕೋಟಿ ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ನಿಭಾಯಿಸುತ್ತಿದೆ. ಉಳಿದ ₹3000 ಕೋಟಿ ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗೆ ಸೀಮಿತವಾಗಿದೆ. ಆದರೆ ಅವುಗಳ ಪರಿಪೂರ್ಣ ಅನುಷ್ಠಾನ ಎಂದಿಗೂ ನಡೆದಿಲ್ಲ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....