ಕೇಂದ್ರ ಬಜೆಟ್ 2026 | ಯಾವುದು ಅಗ್ಗ, ಯಾವುದು ದುಬಾರಿ?

Date:

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದ್ದು ಕೆಲವು ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಇನ್ನು ಕೆಲವು ವಸ್ತುಗಳಿಗೆ ತೆರಿಗೆ, ಕಸ್ಟಮ್ ಸುಂಕ ಹೆಚ್ಚಿಸುವ ಘೋಷಣೆ ಮಾಡಿದ್ದಾರೆ.

- Advertisement -

ಈ ತೆರಿಗೆ, ಕಸ್ಟಮ್ ಸುಂಕ ಆಧಾರದಲ್ಲಿ ಇನ್ಮುಂದೆ ಯಾವುದು ದುಬಾರಿಯಾಗಲಿದೆ ಮತ್ತು ಯಾವುದು ಅಗ್ಗವಾಗಲಿದೆ ಎಂದು ತಿಳಿಯಲಿದೆ. ಅದರಂತೆ ನೋಡಿದಾಗ ಕೆಲವು ಔಷಧಿಗಳ ಬೆಲೆ ಇಳಿಕೆಯಾದರೆ, ಕೆಲವು ಕೈಗಾರಿಕಾ ಸರಕುಗಳ ಬೆಲೆ ಹೆಚ್ಚಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ 2026 | ಪ್ರತಿ ಜಿಲ್ಲೆಯಲ್ಲಿ ಒಂದು ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪನೆ

ಯಾವುದು ದುಬಾರಿಯಾಗಲಿದೆ?

ತಂಬಾಕು ಉತ್ಪನ್ನಗಳು: ಅಬಕಾರಿ ಸುಂಕ ಮತ್ತು ಆರೋಗ್ಯ ಸೆಸ್ ಹೆಚ್ಚಳದಿಂದಾಗಿ ಸಿಗರೇಟ್, ಪ್ಯಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳು ಹೆಚ್ಚು ದುಬಾರಿಯಾಗಲಿವೆ.

ಮದ್ಯದ ಬೆಲೆ ಹೆಚ್ಚಳ: ಮದ್ಯದ ಬೆಲೆ ಏರಿಕೆ ಘೋಷಣೆ ಮಾಡಲಾಗಿದೆ.

ಐಷಾರಾಮಿ ಕೈಗಡಿಯಾರಗಳು ಮತ್ತು ಆಮದು ಮಾಡಿಕೊಂಡ ಮದ್ಯವು ದುಬಾರಿಯಾಗಲಿದೆ.

ವಿಮಾನದ ಬಿಡಿ ಭಾಗಗಳ ಬೆಲೆಯೂ ಏರಿಕೆಯಾಗಲಿದೆ.

ಯಾವುದು ಅಗ್ಗವಾಗಲಿದೆ?

ಅಗತ್ಯ ಔಷಧಗಳು: ಹೊಸ ಕಸ್ಟಮ್ಸ್ ಸುಂಕ ವಿನಾಯಿತಿಯಿಂದಾಗಿ ಮಧುಮೇಹ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳು ಸೇರಿ 17 ಔಷಧಗಳ ದರ ಇಳಿಕೆಯಾಗಲಿದೆ.

ಮೊಬೈಲ್ ಫೋನ್‌ಗಳು: ಭಾರತದಲ್ಲೇ ತಯಾರಿಸಿದ ಮೊಬೈಲ್ ಫೋನ್‌ಗಳು, ಟ್ಯಾಬ್ಲೆಟ್ಸ್‌ಗಳ ಬೆಲೆ ಇಳಿಕೆ ಸಾಧ್ಯತೆಯಿದೆ.

ಇವಿ ಬ್ಯಾಟರಿಗಳು: ಲಿಥಿಯಂ-ಐಯಾನ್ (ಲಿ-ಐಯಾನ್) ಸೆಲ್ಸ್‌ಗಳ ಮೇಲಿನ ಬಿಸಿಡಿ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಇವಿ ಬ್ಯಾಟರಿಗಳ ಬೆಲೆ ಕಡಿಮೆಯಾಗಿದೆ.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್‌ 2026 | ನಿರ್ಮಲಾ ಸೀತಾರಾಮನ್ ಮಂಡಿಸಿದ ಆಯವ್ಯಯದ ಪ್ರಮುಖ ಅಂಶಗಳು

ಚರ್ಮ ಮತ್ತು ಜವಳಿ: ವೆಟ್ ಬ್ಲೂ ಲೆದರ್‌ನಂತಹ ಕಚ್ಚಾ ವಸ್ತುಗಳು ಮತ್ತು ಜವಳಿಗಳಿಗೆ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ ಚರ್ಮದ ಉತ್ಪನ್ನಗಳು ಮತ್ತು ಉಡುಪುಗಳನ್ನು ಅಗ್ಗವಾಗಲಿದೆ.

ಮೀನು ಮೊದಲಾದ ಸಮುದ್ರ ಉತ್ಪನ್ನಗಳು: ಸಮುದ್ರ ಉತ್ಪನ್ನಗಳ ಸಂಸ್ಕರಣೆಗೆ ಬಳಸುವ ಅಗತ್ಯ ವಸ್ತುಗಳ ಸುಂಕ ರಹಿತ ಆಮದು ಮಿತಿಯನ್ನು ಹಿಂದಿನ ವರ್ಷದ ರಫ್ತು ವಹಿವಾಟಿನ ಶೇ. 1 ರಿಂದ ಶೇ. 3 ಕ್ಕೆ ಏರಿಸಲಾಗಿದೆ.

ಕ್ರೀಡಾ ಉಪಕರಣಗಳು: ಅಥ್ಲೆಟಿಕ್‌ಗಳನ್ನು ಉತ್ತೇಜಿಸಲು ಕ್ರೀಡಾ ಸರಕುಗಳು ಹೆಚ್ಚು ಕೈಗೆಟುಕುವಂತೆ ಮಾಡಲಾಗುವುಉದ ಎಂದು ಕೇಂದ್ರ ವಿತ್ತ ಸಚಿವೆ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...