‘ಒಂದು ದೇಶ- ಒಂದು ಚುನಾವಣೆ’ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಡಿಸೆಂಬರ್ 12ರಂದು ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ, ಒಂದು ಚುನಾವಣೆ ಶಿಫಾರಸನ್ನು ಅಂಗೀಕರಿಸಿದ್ದು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು ಸಮಗ್ರವಾದ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಒಂದು ದೇಶ ಒಂದು ಚುನಾವಣೆ ; ಒಂದು ಉದ್ದೇಶ ಹಲವು ವೇಷ ಅಷ್ಟೇ…
ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸನ್ನು ಸರ್ಕಾರವು ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಿದೆ.
Union Cabinet approves 'One Nation, One Election' Bill: sources
— Press Trust of India (@PTI_News) December 12, 2024
ಈ ಪರಿಕಲ್ಪನೆಗೆ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಉನ್ನತ ಮಟ್ಟದ ಸಮಿತಿಯ ಸಮಾಲೋಚನೆಯ ಸಂದರ್ಭದಲ್ಲಿ ಮೂವರು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಒಬ್ಬ ಮಾಜಿ ರಾಜ್ಯ ಚುನಾವಣಾ ಆಯುಕ್ತರು ಈ ಕಲ್ಪನೆಗೆ ವಿರೋಧ ವ್ಯಕ್ತಪಡಿಸಿದ್ದರು.
