ಬರ ಪರಿಹಾರ | ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್‌ ಹಾದಿ ತಪ್ಪಿಸಲೆತ್ನಿಸಿದ ಕೇಂದ್ರ ಸರ್ಕಾರ: ಸಿಎಂ ಕಿಡಿ

Date:

“ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ” ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರ ಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿದೆ. ಹೀಗಾಗಿ, ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರ ಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

“ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟಿಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ” ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಇದು ಒಪ್ಪುವಂಥದ್ದಲ್ಲ” ಎಂದು ಮುಖ್ಯಮಂತ್ರಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

“ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ” ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬರ ಪರಿಹಾರ | ಎಲ್ಲದಕ್ಕೂ ರಾಜ್ಯಗಳು ನಮ್ಮತ್ರ ಬರಬೇಕಾ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

“ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ. ಬರ ಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜ ಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...