2020ರಲ್ಲಿ ಕಂಗನಾ ಪರ ನಿಂತ ಕೇಂದ್ರ ಈಗ ಕುನಾಲ್ ಕಾಮ್ರಾಗೆ ರಕ್ಷಣೆ ಒದಗಿಸಲಿ: ಸಂಜಯ್ ರಾವತ್

Date:

2020ರಲ್ಲಿ ನಟಿ ಕಂಗನಾ ರಣಾವತ್ ಅವರನ್ನು ರಕ್ಷಿಸಿದಂತೆ ಈಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಬಗ್ಗೆ ಟೀಕೆ ಮಾಡಿರುವ ಸ್ಟಾಂಡಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಶನಿವಾರ ಆಗ್ರಹಿಸಿದ್ದಾರೆ.

- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಸ್ಟಾಂಡಪ್ ಕಾಮೆಡಿ ಮಾಡಿದ್ದ ಕುನಾಲ್ ಕಾಮ್ರಾ, ಶಿಂದೆ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು. ತನ್ನದೇ ಪಕ್ಷವನ್ನು ಇಬ್ಭಾಗ ಮಾಡಿದ ದ್ರೋಹಿ ಎಂದು ಕರೆದಿದ್ದರು. ಆದರೆ ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದೆ ಥಾಣೆಯ ನಾಯಕ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದನ್ನು ಓದಿದ್ದೀರಾ? ಶಿವಸೇನೆ ಕಾರ್ಯಕರ್ತರನ್ನು ಕುಟುಕಿದ ಕುನಾಲ್ ಕಾಮ್ರಾ ಹೊಸ ಹಾಡು

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಶಿಂದೆ ಕಾರ್ಯಕರ್ತರು ಹಾಸ್ಯ ಕಾರ್ಯಕ್ರಮ ನಡೆದ ಸ್ಟುಡಿಯೋವನ್ನು ಧ್ವಂಸ ಮಾಡಿದ್ದರು. ಹೊಟೇಲ್‌ನಲ್ಲಿ ದಾಂಧಲೆ ಮಾಡಿದ್ದರು. ಹಾಗೆಯೇ ಕುನಾಲ್‌ಗೆ ಜೀವ ಬೆದರಿಕೆ ಕೂಡಾ ಹಾಕಿದ್ದರು. ಕುನಾಲ್ ವಿರುದ್ಧ ದೂರು ಕೂಡಾ ದಾಖಲಾಗಿತ್ತು. ಶನಿವಾರ ಮತ್ತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ನಡುವೆ ಶಿವಸೇನೆ ನಾಯಕರು, ಕಾರ್ಯಕರ್ತರಿಂದ ಜೀವ ಬೆದರಿಕೆಯನ್ನು ಎದುರಿಸುತ್ತಿರುವ ಕುನಾಲ್ ಕಾಮ್ರಾ ಅವರಿಗೆ ರಕ್ಷಣೆ ಒದಗಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಈ ಸಂದರ್ಭದಲ್ಲೇ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಯನ್ನು ಪ್ರತಿಪಾದಿಸುವ ಕವಿತೆಯ ವಿಡಿಯೋವನ್ನು ಪೋಸ್ಟ್ ಮಾಡಿರುವ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗರ್ಹಿ ವಿರುದ್ಧ ದಾಖಲಾಗಿದ್ದು ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನೂ ರಾವತ್ ಸ್ವಾಗತಿಸಿದರು. ಪ್ರತಾಪ್‌ಗರ್ಹಿಯಂತೆ ಕಾಮ್ರಾ ಕೂಡಾ ಓರ್ವ ಕಲಾವಿದ, ಕವಿ, ವಿಡಂಬನಕಾರ ಎಂದು ಸಂಸದರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕುನಾಲ್ ಕಾಮ್ರಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ಒಪ್ಪಿಗೆ ನೀಡಿದ ಮಹಾರಾಷ್ಟ್ರ ವಿಧಾನ ಪರಿಷತ್

“ಕಾಮ್ರಾ ಮುಂಬೈಗೆ ಬಂದು ತನ್ನ ವಾದವನ್ನು ಪೊಲೀಸರ ಮುಂದೆ ಇರಿಸಬೇಕು. ಕಂಗನಾ ರಣಾವತ್ ಅವರನ್ನು ನಾವು ಅವರ ಮೇಲೆ ದಾಳಿ ಮಾಡುತ್ತೇವೆ ಎಂಬ ಭಯದಿಂದ ಕೇಂದ್ರ ಸರ್ಕಾರ ರಕ್ಷಿಸಿತ್ತು. ಕುನಾಲ್ ಕಾಮ್ರಾ ಅವರಿಗೂ ವಿಶೇಷ ರಕ್ಷಣೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಆಗ್ರಹಿಸಿದರು.

2020ರಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಾಂದ್ರಾದಲ್ಲಿರುವ ಕಂಗನಾ ರಣಾವತ್ ಅವರ ಬಂಗಲೆಯ ಒಂದು ಭಾಗವನ್ನು ಅಕ್ರಮವೆಂದು ಹೇಳಿ ಕೆಡವಲಾಗಿತ್ತು. ಇದರಿಂದಾಗಿ ನಟಿ ಮತ್ತು ಶಿವಸೇನೆ ನಾಯಕರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಅದಾದ ಬಳಿಕ ಪ್ರಸ್ತುತ ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆಯಾಗಿರುವ ರಣಾವತ್ ಅವರಿಗೆ ಕೇಂದ್ರ ಸರ್ಕಾರವು ರಕ್ಷಣೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...