ದೇಶದ ಯುವಕರನ್ನು ದಾರಿತಪ್ಪಿಸಲು ಕೇಂದ್ರದಿಂದ ಮಾದಕ ವಸ್ತುಗಳ ಬಳಕೆ; ಕನ್ನಯ್ಯ ಕುಮಾರ್ ಆರೋಪ

Date:

Advertisements

ದೇಶದ ಯುವಕರನ್ನು ದಾರಿತಪ್ಪಿಸಲು ಕೇಂದ್ರ ಸರ್ಕಾರ ಮಾದಕ ವಸ್ತುಗಳನ್ನು ಸಾಧನವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಆರೋಪಿಸಿದ್ದಾರೆ.

ಇಂದು (ಅಕ್ಟೋಬರ್ 29) ಮುಂಬೈ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದ ಹಲವಾರು ಬಂದರುಗಳಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಆದರೆ ದೊಡ್ಡ ಪ್ರಮಾಣದ ಸರಕುಗಳು ಪತ್ತೆಯಾಗದಿರುವುದು ಯುವಕರು ಮತ್ತು ದೇಶಕ್ಕೆ ಗಂಭೀರ ಪ್ರಶ್ನೆಯಾಗಿದೆ’ ಎಂದರು.

“ಯುವಕರನ್ನು ದಾರಿತಪ್ಪಿಸಲು ಹಲವಾರು ಸಾಧನಗಳಿವೆ. ಅವುಗಳಲ್ಲಿ ಮಾದಕ ವಸ್ತು ಪ್ರಮುಖವಾದದು. ಯುವಕರು ಮಾದಕ ವ್ಯಸನದಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರ ಸಮುದಾಯಕ್ಕೆ ಏನು ಮಾಡಲಾಗುತ್ತಿದೆ ಎಂದು ತಿಳಿಯದಂತೆ ಭ್ರಮೆಯ ಸ್ಥಿತಿಗೆ ತಳ್ಳಲಾಗುತ್ತಿದೆ. ಮಾದಕ ವ್ಯಸನದಿಂದ ಅವರ ಭವಿಷ್ಯ ಮತ್ತು ಇಡೀ ದೇಶಕ್ಕೆ ಏನು ಮಾಡಲಾಗುತ್ತಿದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ” ಎಂದು ಕನ್ನಯ್ಯ ಕುಮಾರ್ ಹೇಳಿದರು.

Advertisements

ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮಹಾನಗರಕ್ಕೆ ನೀಡಿದ ತಮ್ಮ ಮೊದಲ ಭೇಟಿಯಲ್ಲಿ ಕನ್ನಯ್ಯ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಘೋಷಣೆಯನ್ನು ಟೀಕಿಸಿದರು ಮತ್ತು ಸಾವಿರಾರು ಜನರನ್ನು ಏಕೆ ನಿರ್ಲಕ್ಷಿಸಲಾಗುತ್ತಿದೆ ಮತ್ತು ಅವರ ಹಕ್ಕುಗಳಿಂದ ದೂರ ಇಡಲಾಗಿದೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವ ಗಡ್ಡಧಾರಿ-ಟೋಪಿಧಾರಿ ವ್ಯಕ್ತಿಗಳಿಗೆ ಥಳಿಸಿ ಎಂದ ಬಿಜೆಪಿ ಶಾಸಕ

“ನಿರುದ್ಯೋಗ ಸಮಸ್ಯೆಯು ನಿರ್ಣಾಯಕವಾಗಿರುವ ಸಮಯದಲ್ಲಿ ಪ್ರಧಾನ ಮಂತ್ರಿ ವಿದ್ಯಾರ್ಥಿಗಳಿಗಾಗಿ ವಿಶೇಷ ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಮಾಡುವ ಬದಲು, ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳ ತಮ್ಮ ಹಳೆಯ ಭರವಸೆಯನ್ನು ಈಡೇರಿಸಬೇಕಾಗಿದೆ. ಅವರ 9 ವರ್ಷಗಳ ಅಧಿಕಾರಾವಧಿಯಲ್ಲಿ, 18 ಕೋಟಿ ಉದ್ಯೋಗಗಳು ಎಲ್ಲಿ ಹೋದವು? ಭಾರತದ ಒಟ್ಟು ಬಜೆಟ್‌ನಲ್ಲಿ ಶೇ.10 ರಷ್ಟನ್ನೂ ಶಿಕ್ಷಣಕ್ಕಾಗಿ ಖರ್ಚು ಮಾಡಲಾಗಿಲ್ಲ. ಶಿಕ್ಷಣವನ್ನು ಖಾಸಗೀಕರಣಗೊಳಿಸಲು ಸರ್ಕಾರ ಬಯಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಹೇಳಿದರು.

“ಸಾಮಾನ್ಯ ಜನರು ತಮ್ಮ ಇಡೀ ಜೀವನವನ್ನು ಮಕ್ಕಳ ಶಾಲಾ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇತರ ವೆಚ್ಚಗಳನ್ನು ಸರಿದೂಗಿಸುವುದರಲ್ಲಿಯೇ ಕಾಲ ಕಳೆಯಬೇಕಾಗಿದೆ. ಇನ್ನೊಂದೆಡೆ ನಿರುದ್ಯೋಗದಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇಂದು ದೇಶದಲ್ಲಿ ಪ್ರತಿ ಗಂಟೆಗೆ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿಯವರು ನೀಡಿದ ಭರವಸೆಗಳಲ್ಲಿ ಶೇಕಡಾ 5 ರಷ್ಟು ಈಡೇರಿದ್ದರೂ ದೇಶದ ಜನರು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇಡೀ ದೇಶದಲ್ಲಿ ಎಲ್ಲಿಯೂ ದುರ್ಬೀನು ಹಾಕಿ ಹುಡುಕಿದರೂ ಒಳ್ಳೆಯ ದಿನಗಳ ನೋಡಲಾಗದ ಪರಿಸ್ಥಿತಿ ಇದೆ” ಎಂದು ಕೇಂದ್ರದ ವಿರುದ್ಧ ಕನ್ನಯ್ಯ ಅವರು ಕಿಡಿ ಕಾರಿದರು.

“ ಪ್ರಧಾನಿಯವರು ಸದ್ಯ ಮನ್ ಕಿ ಬಾತ್‌ಗಿಂತ ‘ಜನ್ ಕಿ ಬಾತ್’ (ಜನರ ಬೇಡಿಕೆಗಳು ಮತ್ತು ಆಸೆಗಳು) ಮಾಡಬೇಕಿದೆ” ಎಂದು ಕನ್ನಯ್ಯಾ ಕುಮಾರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X