ರಾಜ್ಯಗಳ ತೆರಿಗೆ ಪಾಲು ವಿತರಿಸಿದ ಕೇಂದ್ರ ಸರ್ಕಾರ: ಕರ್ನಾಟಕಕ್ಕೆ ₹2,660 ಕೋಟಿ

Date:

ಕೇಂದ್ರ ಸರಕಾರವು ರಾಜ್ಯಗಳಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ತೆರಿಗೆ ಪಾಲನ್ನು ಈ ವರ್ಷ ಮೂರು ದಿನ ಮೊದಲೇ ಬಿಡುಗಡೆ ಮಾಡಿದೆ.

- Advertisement -

ರಾಜ್ಯಗಳ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರವು, ಒಟ್ಟು 72,961.21 ಕೋಟಿ ರೂ. ಹಂಚಿಕೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಪಾಲು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ. ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ.

ಮಂಗಳವಾರ ಹಣಕಾಸು ಸಚಿವಾಲಯ ಮಂಗಳವಾರ ಬಿಡುಗಡೆಗೊಳಿಸಿರುವ ಪಟ್ಟಿಯಲ್ಲಿ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ(₹13,088.51 ಕೋಟಿ), ಬಿಹಾರ(₹7,338.44 ಕೋಟಿ) ಮತ್ತು ಮಧ್ಯಪ್ರದೇಶ(₹5,727.44 ಕೋಟಿ) ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ(₹281.63 ಕೋಟಿ) ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ(₹283.10 ಕೋಟಿ), ಮಿಝೋರಾಂ(₹364.80 ಕೋಟಿ) ನಂತರದ ಸ್ಥಾನದಲ್ಲಿವೆ.

ಸಾಮಾನ್ಯವಾಗಿ ನವೆಂಬರ್‌ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿಯನ್ನು ಕೇಂದ್ರ ಸರ್ಕಾರವು ಪಾಲಿಸುತ್ತಾ ಬಂದಿದೆ. ಆದರೆ, ಈ ಬಾರಿ ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.

ಹಬ್ಬದ ಸಮಯದಲ್ಲಿ ಖರೀದಿ ಭರಾಟೆ ಜೋರಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ರಾಜ್ಯಗಳಿಗೆ ತಮ್ಮ ತಮ್ಮ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...